ಸಾಂದರ್ಭಿಕ ಚಿತ್ರ 
ದೇಶ

ವಾಯುಭಾರ ಕುಸಿತ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಮತ್ತೆ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಶನಿವಾರ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಶನಿವಾರ ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ದುರ್ಬಲಗೊಂಡಿದ್ದ ನಿವಾರ್ ಚಂಡಮಾರುತ ಮತ್ತೆ ಬಲಗೊಳ್ಳುತ್ತಿದ್ದು, ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಇದರಿಂದ ಡಿಸೆಂಬರ್ 1ರಿಂದ ಮತ್ತೆ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.

ನಿವಾರ್ ಚಂಡಮಾರುತದ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡಿನಲ್ಲಿ ಡಿ.1ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನ.29ರವರೆಗೆ ಮಳೆಯಾಗಲಿದ್ದು, ನ.30 ಮತ್ತು ಡಿ.1ರಂದು ಒಣಹವೆ ನಿರೀಕ್ಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.

ಇದರ ಪ್ರಭಾವದಿಂದ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಹೇ, ಲಕ್ಷದ್ವೀಪ, ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ದಕ್ಷಿಣ ರಾಯಲಸೀಮಗಳಲ್ಲಿ ಮಂಗಳವಾರ ಮತ್ತು ಬುಧವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್