ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರೈತರ ಪ್ರತಿಯೊಂದು ಸಮಸ್ಯೆ, ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧ- ಅಮಿತ್ ಶಾ

ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಯೊಂದು ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ.

ಅಮಿತ್ ಶಾ
Nagaraja AB
Updated On : 28 Nov 2020, 11:55 pm

ನವದೆಹಲಿ: ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಯೊಂದು ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಾ ದೆಹಲಿ ತಲುಪಿರುವ ರೈತರು ಪೊಲೀಸರು ನಿಗದಿಪಡಿಸಿರುವ ನಿರಂಕರಿ ಸಮಾಗಮ ಮೈದಾನದಲ್ಲಿಯೇ ಪ್ರತಿಭಟನೆ ನಡೆಸಬೇಕು ಎಂದು ಒತ್ತಾಯಿಸಿರುವ ಅಮಿತ್ ಶಾ, ಡಿಸೆಂಬರ್ 3ಕ್ಕಿಂತ ಮುಂಚಿತವಾಗಿಯೇ ರೈತರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಡಿಸೆಂಬರ್ 3ರಂದು ನರೇಂದ್ರ ಸಿಂಗ್ ತೋಮರ್ ಕರೆದಿರುವ ಸಭೆಯಲ್ಲಿ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಅವರೆಲ್ಲಾ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸಲಾಗುವುದು ಎಂದರು.

Advertisement

Advertisement

ಅನೇಕ ಸ್ಥಳ ಹಾಗೂ ಹೆದ್ದಾರಿಗಳಲ್ಲಿ ತಮ್ಮ ಟ್ರಾಕ್ಟರ್ ಗಳೊಂದಿಗೆ ರೈತರು ಪ್ರತಿಭಟನೆಗೆ ಕುಳಿತಿದ್ದಾರೆ. ದೊಡ್ಡ ಮೈದಾನಕ್ಕೆ ರೈತರನ್ನು ಸ್ಥಳಾಂತರಿಸಲು ದೆಹಲಿ ಪೊಲೀಸರು ಸಿದ್ಧರಾಗಿದ್ದು, ಪೊಲೀಸರು ಗೊತ್ತುಪಡಿಸಿರುವ ಸ್ಥಳಕ್ಕೆ ತೆರಳುವಂತೆ ರೈತರಿಗೆ ಅವರು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement