ಅತ್ಯಾಚಾರ 
ದೇಶ

ಉತ್ತರ ಪ್ರದೇಶ: ಸೊಸೆಯ ಮೇಲೆ ಮಾವನ ಅತ್ಯಾಚಾರ; ಪ್ರಶ್ನಿಸಿದ ಮಗನನ್ನೇ ಹತ್ಯೆ ಮಾಡಿದ ಪಾಪಿ ತಂದೆ!

ಸೊಸೆಯ ಮೇಲೆ ಮಾವನೇ ಅತ್ಯಾಚಾರವೆಸಗಿದ್ದು, ಪ್ರಶ್ನಿಸಲು ಬಂದ ಮಗನನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ. 

ಲಖನೌ: ಸೊಸೆಯ ಮೇಲೆ ಮಾವನೇ ಅತ್ಯಾಚಾರವೆಸಗಿದ್ದು, ಪ್ರಶ್ನಿಸಲು ಬಂದ ಮಗನನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ. 

ಪರವಾನಗಿ ಇರುವ ರಿವಾಲ್ವರ್ ನಿಂದ ಮಗನನ್ನು ತಂಡೆ ಹತ್ಯೆ ಮಾಡಿದ್ದಾನೆ. ಮಜೋಲಾದ ಹನುಮಾನ್ ನಗರದಲ್ಲಿ ಆರೋಪಿ ವಾಸಿಸುತ್ತಿದ್ದು, ಹತ್ಯೆ, ಅತ್ಯಾಚಾರದ ಆರೋಪದಲ್ಲಿ 56 ವರ್ಷದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. 

ಸಾವನ್ನಪ್ಪಿದ ವ್ಯಕ್ತಿಗೆ ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು. ಮಾವ ತನ್ನ ಸೊಸೆಯ ಮೇಲೆ ಅತ್ಯಾಚಾರವೆಸಗುವ ದಿನ ಕುಟುಂಬದ ಉಳಿದ ಸದಸ್ಯರು ವಿವಾಹ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಈ ವೇಳೆ ನಡೆದ ಘಟನೆಯನ್ನು ಮಹಿಳೆ ತನ್ನ ಗಂಡನಿಗೆ ತಿಳಿಸಿದ್ದಾರೆ.  ಈ ಹೇಯ ಕೃತ್ಯವನ್ನು ಪ್ರಶ್ನಿಸಲು ಬಂದ ಮಗ ಪೊಲೀಸ್ ಗೆ ದೂರು ನೀಡುವುದಾಗಿ ಎಚ್ಚರಿಸಿದ್ದಾನೆ, ಈ ವೇಳೆ ವಾಗ್ವಾದ ನಡೆದಿದ್ದು, ಸಹೋದರನೂ ಸಹ ತಂದೆಗೇ ಬೆಂಬಲವಾಗಿ ಮಾತನಾಡಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ