ಚಿಯಾನ್ ವಿಕ್ರಂ 
ದೇಶ

ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ 

 ತಮಿಳು ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮನೆ ತಪಾಸಣೆ ನಡೆಸಿದ ಪೊಲೀಸರು ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.

ಚೆನ್ನೈ: ತಮಿಳು ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮನೆ ತಪಾಸಣೆ ನಡೆಸಿದ ಪೊಲೀಸರು ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.

ವಿಕ್ರಂ ಅವರಿಗೆ ಸೇರಿದ್ದ ಚೆನ್ನೈನ ಬೆಸೆಂಟ್ ನಗರದ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ  ಇಂದು ಮಧ್ಯಾಹ್ನ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಬಂದಿತ್ತು. ಬಾಂಬ್ ನಿಷ್ಕ್ರೀಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯಲ್ಲಿ ತಪಾಸಣೆ ನಡೆಸಿದರು. ಬಳಿಕ ಇದೊಂದು ಹುಸಿ ಕರೆ ಎಂದು ಅವರು ತಿಳಿಸಿದರು. 

ಈ ಹಿಂದೆ ನಟರಾದ ಅಜಯ್, ಅಜಿತ್ , ಸೂರ್ಯ, ವಿಜಯ ಕಾಂತ್ ಮತ್ತು ರಜನಿಕಾಂತ್ ಅವರು ಸಹ ಇಂತಹ ಕರೆಗಳನ್ನು ಸ್ವೀಕರಿಸಿದ್ದಾರೆ.ಈ ಹಿಂದಿನ ಪ್ರಕರಣಗಳಲ್ಲಿ ವಿಲ್ಲುಪುರಂನ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಮತ್ತಿತರ ನಟರಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ. ಇದೇ ವ್ಯಕ್ತಿ ಇದರಲ್ಲಿ ತೊಡಗಿರುವ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT