ದೇಶ

ಲಕ್ಷ್ಮಿ ವಿಲಾಸ್ ಬ್ಯಾಂಕ್ ಗ್ರಾಹಕರಿ ಎಲ್ಲಾ ಸೇವೆ ಲಭ್ಯ, ಬಡ್ಡಿ ದರದಲ್ಲಿ ಬದಲಾವಣೆ ಇಲ್ಲ: ಡಿಬಿಎಸ್

Lingaraj Badiger

ನವದೆಹಲಿ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದ ತಮಿಳುನಾಡು ಮೂಲದ ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್ ಅನ್ನು, ಸಿಂಗಾಪುರ ಮೂಲದ ಡಿಬಿಎಸ್‌ ಬ್ಯಾಂಕ್ ಇಂಡಿಯಾದೊಂದಿಗೆ ವಿಲೀನಗೊಳಿಸಲಾಗುತ್ತಿದ್ದು, ಇನ್ನುಮುಂದೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ಗ್ರಾಹಕರಿಗೆ ಡಿಬಿಎಸ್ ಬ್ಯಾಂಕ್ ನ ಎಲ್ಲಾ ಸೇವೆಗಳನ್ನು ಪಡೆದುಕೊಳ್ಳಬಹುದು.

ಲಕ್ಷ್ಮಿ ವಿಲಾಸ್ ಬ್ಯಾಂಕ್ ಗ್ರಾಹಕರು ನಮ್ಮ ಎಲ್ಲಾ ಬ್ಯಾಂಕಿಂಗ್ ಸೇವೆಗಳನ್ನು ಪಡೆದುಕೊಳ್ಳಬಹುದು ಮತ್ತು ಉಳಿತಾಯ ಮತ್ತು ಸ್ಥಿರ ಠೇವಣಿಗಳ ಮೇಲಿನ ಬಡ್ಡಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಡಿಬಿಎಸ್ ಬ್ಯಾಂಕ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ಲಕ್ಷ್ಮಿ ವಿಲಾಸ್ ಬ್ಯಾಂಕ್(ಎಲ್‌ವಿಬಿ) ಅನ್ನು ಈಗ ಡಿಬಿಎಸ್ ಬ್ಯಾಂಕ್ ಇಂಡಿಯಾ ಲಿಮಿಟೆಡ್(ಡಿಬಿಐಎಲ್) ನೊಂದಿಗೆ ವಿಲೀನಗೊಳಿಲಾಗಿದೆ ಎಂದು ಡಿಬಿಎಸ್ ಬ್ಯಾಂಕ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

1949 ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 45 ರ ಅಡಿಯಲ್ಲಿ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವಿಶೇಷ ಅಧಿಕಾರಗಳ ಅಡಿಯಲ್ಲಿ ಲಕ್ಷ್ಮಿ ವಿಲಾಸ್ ಬ್ಯಾಂಕ್ ಅನ್ನು ಡಿಬಿಎಸ್ ಬ್ಯಾಂಕ್ ಇಂಡಿಯಾಕ್ಕೆ ವಿಲೀನಗೊಳಿಸಿದ್ದು, ನವೆಂಬರ್ 27 ರಿಂದ ಜಾರಿಗೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.

SCROLL FOR NEXT