ಜಿಜೆಎಂ ನಾಯಕ ರೋಷನ್ ಗಿರಿ 
ದೇಶ

ಟಿಎಂಸಿ ನಾಯಕರ ಸರಣಿ ರಾಜೀನಾಮೆ ಬೆನ್ನಲ್ಲೇ ಮಮತಾ ಬ್ಯಾನರ್ಜಿಗೆ ಜಿಜೆಎಂ ಬೆಂಬಲ

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಪಕ್ಷದ ನಾಯಕರ ಸರಣಿ ರಾಜೀನಾಮೆಯಿಂದ ಕಂಗೆಟ್ಟಿದ್ದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಗೆ ಜಿಜೆಎಂ ಬೆಂಬಲ ಘೋಷಿಸಿದ್ದು ಹೊಸ ಆಶಾಕಿರಣ ಮೂಡಿದೆ.

ಸಿಲಿಗಿರಿ: ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಪಕ್ಷದ ನಾಯಕರ ಸರಣಿ ರಾಜೀನಾಮೆಯಿಂದ ಕಂಗೆಟ್ಟಿದ್ದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಗೆ ಜಿಜೆಎಂ ಬೆಂಬಲ ಘೋಷಿಸಿದ್ದು ಹೊಸ ಆಶಾಕಿರಣ ಮೂಡಿದೆ.

ಗೋರ್ಖಾ ಜನಮುಕ್ತಿ ಮೋರ್ಚಾ (ಬಿಮಾಲ್ ಗುರುಂಗ್ ಬಣ)ದ ರೋಷನ್ ಗಿರಿ ಈ ಬಗ್ಗೆ ಮಾತನಾಡಿದ್ದು, 2021 ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ. 

ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ರೋಷನ್ ಗಿರಿ, "ನಮಗೆ ಮೋಸ ಮಾಡಿದ ಬಿಜೆಪಿಯನ್ನು ಮಣಿಸಲು ನಾವು ನಿರ್ಧರಿಸಿದ್ದೇವೆ, 2009-2020 ರವರೆಗೆ ಅವರು ನೀಡಿರುವ ಭರವಸೆಗಳ ಪೈಕಿ ಒಂದೇ ಒಂದು ಭರವಸೆಯನ್ನೂ ಅವರು ಈಡೇರಿಸಿಲ್ಲ. ಅವರು ಕೇವಲ ಭರವಸೆಗಳನ್ನಷ್ಟೇ ನೀಡುತ್ತಾರೆ. ಉತ್ತರ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯನ್ನು ನಾವು ಬೆಂಬಲಿಸಲಿದ್ದೇವೆ, ಅವರು ಮೂರನೇ ಬಾರಿ ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮ ಆಶಯ" ಎಂದು ತಿಳಿಸಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಗೋರ್ಖಾಲ್ಯಾಂಡ್ ವಿಷಯಕ್ಕೆ ಯಾರು ಬೆಂಬಲಿಸುತ್ತಾರೋ ಅವರನ್ನು ನಾವು ಬೆಂಬಲಿಸುತ್ತೇವೆ ಎಂದು ರೋಷನ್ ಗಿರಿ ತಿಳಿಸಿದ್ದಾರೆ. 2021 ರಲ್ಲಿ 294 ಸ್ಥಾನಗಳನ್ನು ಹೊಂದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಬಿರುಸಿನ ಪ್ರಚಾರ ಪ್ರಾರಂಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT