ದೇಶ

ಕೋವಿಡ್-19: ದೇಶದಲ್ಲಿಂದು 38,772 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 94 ಲಕ್ಷ

Manjula VN

ನವದೆಹಲಿ: ದೇಶದಲ್ಲಿಂದು 38,772 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 94,31,692ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 443 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,37,139ಕ್ಕೆ ತಲುಪಿದೆ ಎಂದು ಮಾಹಿತಿ ನೀಡಿದೆ. 

ಈ ನಡುವೆ ದೇಶದಲ್ಲಿ ಇದೂವರೆಗೂ ಪತ್ತೆಯಾಗಿರುವ 94 ಲಕ್ಷ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 45,333 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 88,47,600ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,46,952 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

SCROLL FOR NEXT