ದೇಶ

ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಿಂದ 'ಕಿಸಾನ್ ಯಾತ್ರಾ' ಬೃಹತ್ ಪ್ರತಿಭಟನೆ: ಕಾಂಗ್ರೆಸ್ ಆಯೋಜನೆ

Nagaraja AB

ನವದೆಹಲಿ: ಇತ್ತೀಚಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ ಪಂಜಾಬಿನಿಂದ 'ಕಿಸಾನ್ ಯಾತ್ರಾ' ಬೃಹತ್ ಪ್ರತಿಭಟನೆಯನ್ನು ಆಯೋಜಿಸುತ್ತಿದೆ. 

ಇದು ಪಂಜಾಬಿನ ಸಾಂಗ್ರೂರ್ ನಿಂದ ಈ ವಾರದಲ್ಲಿ ಆರಂಭಗೊಳ್ಳಲಿದ್ದು, ನವೆದಹಲಿಯಲ್ಲಿ ಮುಕ್ತಾಯಗೊಳ್ಳಲಿದೆ. ಪಂಜಾಬ್ ಹಾಗೂ ಹರಿಯಾಣದ ವಿವಿಧ ಜಿಲ್ಲೆಗಳಲ್ಲಿ ಸಾಗಲಿದೆ.

ನೆವೆಂಬರ್ 14ರವರೆಗೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾಂಗ್ರೂರ್ ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ರೋಡ್ ಶೋ ಮೂಲಕ ಪಾಟಿಯಾಲಕ್ಕೆ   ಯಾತ್ರೆ ಸಾಗಲಿದೆ. ನಾಳೆ ನಡೆಯಬೇಕಾಗಿದ್ದ ಈ ಕಾರ್ಯಕ್ರಮವನ್ನು ಅಕ್ಟೋಬರ್ 3ಕ್ಕೆ ಮುಂದೂಡಲಾಗಿದೆ.

ರಾಹುಲ್ ಗಾಂಧಿ ಎರಡು ಮೂರು ದಿನಗಳಲ್ಲಿ ಪಂಜಾಬ್ ಹಾಗೂ ಹರಿಯಾಣಕ್ಕೆ ಆಗಮಿಸಲಿದ್ದಾರೆ ಎಂದು ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಶೆಲ್ಜಾ ತಿಳಿಸಿದ್ದಾರೆ.

ಮೋದಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಜನ ಸಾಮಾನ್ಯರಿಗೆ ತಿಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂಬುದು ರಾಹುಲ್ ಗಾಂಧಿ ಆಪ್ತ ಮೂಲಗಳಿಂದ ತಿಳಿದುಬಂದಿದೆ.

SCROLL FOR NEXT