ಸುಪ್ರೀಂಕೋರ್ಟ್ 
ದೇಶ

ಕೋವಿಡ್-19: 'ಅಸಮರ್ಪಕ ನಿರ್ವಹಣೆ' ಕುರಿತು ಸ್ವತಂತ್ರ ತನಿಖೆಗಾಗಿ ಸಲ್ಲಿಸಿದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಸರ್ಕಾರ ಸರಿಯಾದ ರೀತಿಯಲ್ಲಿ ನಿರ್ವಹಿಸಿಲ್ಲ ಎಂದು ಆರೋಪಿಸಿ ನಿವೃತ್ತ ಅಧಿಕಾರಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ನವದೆಹಲಿ: ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಸರ್ಕಾರ ಸರಿಯಾದ ರೀತಿಯಲ್ಲಿ ನಿರ್ವಹಿಸಿಲ್ಲ ಎಂದು ಆರೋಪಿಸಿ ನಿವೃತ್ತ ಅಧಿಕಾರಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಕೇಂದ್ರ ಗೃಹ ಸಚಿವಾಲಯ ಫೆಬ್ರವರಿ 4 ರಂದೇ  ಸಲಹೆಗಳನ್ನು ಹೊರಡಿಸಿದೆ ಆದರೆ, ಮಾರ್ಚ್ 4ರವರೆಗೂ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ನಡೆಸಿಲ್ಲ ಎಂದು  ನ್ಯಾಯಾಧೀಶ ಎಲ್.ಎನ್. ರಾವ್ ನೇತೃತ್ವದ ನ್ಯಾಯಪೀಠ, ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಹೇಳಿತು.

ಕೇಂದ್ರ ಗೃಹ ಸಚಿವಾಲಯದ ಸಲಹೆಯ ಹೊರತಾಗಿಯೂ ಫೆಬ್ರವರಿ 24 ರಂದು ನಡೆದ  ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ 1 ಲಕ್ಷ ಜನರು ಸೇರಲು ಅವಕಾಶ ಮಾಡಿಕೊಡಲಾಗಿತ್ತು ಎಂದು ಪ್ರಶಾಂತ್ ಭೂಷಣ್ ಹೇಳಿದರು.

ಲಾಕ್ ಡೌನ್ ವಿರುದ್ಧ ತಜ್ಞರು ನೀಡಿರುವ ಸಲಹೆಗಳನ್ನು ಸಲ್ಲಿಸಿದ ಪ್ರಶಾಂತ್ ಭೂಷಣ್, ಲಾಕ್ ಡೌನ್ ಕಾರಣದಿಂದ ಜಿಡಿಪಿ ಅಭೂತಪೂರ್ವ ಶೇಕಡಾ 23 ರಷ್ಟು ಕಡಿಮೆಯಾಗಿದೆ. ದೇಶದ ಆರ್ಥಿಕತೆ ನಾಶವಾಗಿದೆ. ಕೋಟ್ಯಂತರ ಉದ್ಯೋಗ ನಷ್ಟವಾಗಿದೆ ಎಂದು ಹೇಳಿದರು.

ಇದು ಸಾರ್ವಜನಿಕವಾಗಿ ಚರ್ಚೆಯಾಗಬೇಕಾದ ವಿಷಯವಾಗಿದ್ದು, ಈ ವಿಷಯದಲ್ಲಿ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿತು. ಸರ್ಕಾರವು ಇದನ್ನು ಪರಿಶೀಲಿಸಬೇಕಾದ ವಿಷಯಗಳು ಎಂದು ನ್ಯಾಯಾಲಯ ತಿಳಿಸಿತು

ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅರ್ಜಿದಾರರು,  1952ರ ತನಿಖಾ ಕಾಯ್ದೆಯಡಿ ನೇಮಕಗೊಂಡ ಆಯೋಗದಿಂದ ಸ್ವತಂತ್ರವಾದ ತನಿಖೆ ನಡೆಯಬೇಕೆಂದು ನ್ಯಾಯಾಲಯವನ್ನು ಕೋರಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT