ದೇಶ

ಪೊಲೀಸರಿಂದ ಒತ್ತಡ; ಸಿಬಿಐ ತನಿಖೆಗೆ ಆಗ್ರಹಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತೆಯ ತಂದೆ 

Srinivas Rao BV

ಲಖನೌ: ಉತ್ತರ ಪ್ರದೇಶದ ಹತ್ರಾಸ್ ಗ್ಯಾಂಗ್ ರೇಪ್ ನ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಪೊಲೀಸರಿಂದ ಒತ್ತಡವಿದ್ದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಂತ್ರಸ್ತೆಯ ತಂದೆ ಆಗ್ರಹಿಸಿದ್ದಾರೆ. 

ಸೆ.29 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರವನ್ನೂ ಪೊಲೀಸರೇ ತರಾತುರಿಯಲ್ಲಿ ನೆರವೇರಿಸಿದ್ದರು. 

ಈ ನಡುವೆ ಸಂತ್ರಸ್ತ ಯುವತಿಯ ಊರಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಮಾಧ್ಯಮದವರೂ ಸೇರಿದಂತೆ ಎಲ್ಲರಿಗೂ ಪ್ರವೇಶ ನಿರ್ಬಂಧಿಸಲಾಗಿದೆ.  

ಇದೇ ವೇಳೆ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾಧ್ರ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಸಂತ್ರಸ್ತ ಯುವತಿಯ ತಂದೆ ಪೊಲೀಸರಿಂದ ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಯಿಂದ ತಮಗೆ ಯಾವುದೋ ದಾಖಲೆಗಳಿಗೆ ಸಹಿ ಹಾಕುವಂತೆ ಒತ್ತಡವಿದೆ ಎಂದು ಹೇಳಿರುವುದು ಬಹಿರಂಗಗೊಂಡಿದೆ.
 
ಯುವತಿಯ ತಂದೆಗೆ ತಮ್ಮ ಮಗಳ ಪ್ರಕರಣದ ಈಗಿನ ತನಿಖೆ ಸಮಾಧಾನಕರವಾಗಿಲ್ಲ. ಈ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನಡೆಸಬೇಕೆಂದು ಆಗ್ರಹಿಸುವಂತೆ ಯಾರೋ ಒಬ್ಬರು ಸಲಹೆ ನೀಡುತ್ತಿರುವುದೂ ಸಹ ಕಂಡುಬಂದಿದೆ. 

SCROLL FOR NEXT