ದೇಶ

ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿಯಿಂದ ಅ. 4 ರಿಂದ 6 ರವರೆಗೆ ಟ್ರಾಕ್ಟರ್ ರ್ಯಾಲಿ

Lingaraj Badiger

ಚಂಡೀಗಢ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ನೂತನ ಕೃಷಿ ಮಸೂದೆ ವಿರುದ್ಧದ ಹೋರಾಟದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದು, ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಗಳನ್ನು ನಡೆಸಲಿದ್ದಾರೆ.

ಇದಕ್ಕೂ ಮೊದಲು ಅಕ್ಟೋಬರ್ 3 ರಿಂದ 5ರ ವರೆಗೆ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ರಾಹುಲ್ ಗಾಂಧಿ ನಿರ್ಧರಿಸಿದ್ದರು ಎಂದು ಪಕ್ಷ ಹೇಳಿದೆ.

"ರಾಹುಲ್ ಗಾಂಧಿ ಅವರ ಟ್ರಾಕ್ಟರ್ ರ್ಯಾಲಿ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅಕ್ಟೋಬರ್ 4, 5, 6ಕ್ಕೆ ಮರು ನಿಗದಿಪಡಿಸಲಾಗಿದೆ. ಉಳಿದ ವಿವರ ಮೊದಲಿನಂತೆಯೇ ಇದೆ" ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಟ್ವೀಟ್ ಮಾಡಿದ್ದಾರೆ.

ಟ್ರಾಕ್ಟ್ ರ್ಯಾಲಿಯಲ್ಲಿ ಅಮರಿಂದರ್ ಸಿಂಗ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಜಖರ್, ಪಕ್ಷದ ಪಂಜಾಬ್ ಉಸ್ತುವಾರಿ ಹರೀಶ್ ರಾವತ್, ಮತ್ತು ಎಲ್ಲಾ ರಾಜ್ಯ ಸಚಿವರು ಮತ್ತು ಪಕ್ಷದ ಶಾಸಕರು ಪಾಲ್ಗೊಳ್ಳಲಿದ್ದಾರೆ. "ರೈತರ ಹೋರಾಟಕ್ಕೆ ಬೆಂಬಲ ನೀಡಲು ಮತ್ತು ಅವರ ನೋವಿಗೆ ಧ್ವನಿಯಾಲು ಕಾಂಗ್ರೆಸ್ ಈ ಪ್ರತಿಭಟನಾ ರ್ಯಾಲಿ ಆಯೋಜಿಸಿದೆ ತುಕ್ರಲ್ ತಿಳಿಸಿದ್ದಾರೆ.

SCROLL FOR NEXT