ಅವನಿಶ್ ಅವಸ್ಥಿ 
ದೇಶ

ಹತ್ರಾಸ್ ಸಂತ್ರಸ್ತೆ ಕುಟುಂಬಸ್ಥರು ಪ್ರಸ್ತಾಪಿಸುವ ಎಲ್ಲಾ ವಿಷಯಗಳನ್ನು ಎಸ್ಐಟಿ ಪರಿಶೀಲಿಸಲಿದೆ: ಯುಪಿ ಗೃಹ ಕಾರ್ಯದರ್ಶಿ

ಹತ್ರಾಸ್ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಸಂತ್ರಸ್ತೆ ಕುಟುಂಬಸ್ಥರು ಪ್ರಸ್ತಾಪಿಸುವ ಎಲ್ಲಾ ವಿಷಯಗಳನ್ನು ಪರಿಶೀಲಿಸಲಿದೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಗೃಹ ಕಾರ್ಯದರ್ಶಿ ಅವನಿಶ್ ಅವಸ್ಥಿ ಅವರು ಶನಿವಾರ ಹೇಳಿದ್ದಾರೆ.

ಹತ್ರಾಸ್: ಹತ್ರಾಸ್ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಸಂತ್ರಸ್ತೆ ಕುಟುಂಬಸ್ಥರು ಪ್ರಸ್ತಾಪಿಸುವ ಎಲ್ಲಾ ವಿಷಯಗಳನ್ನು ಪರಿಶೀಲಿಸಲಿದೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಗೃಹ ಕಾರ್ಯದರ್ಶಿ ಅವನಿಶ್ ಅವಸ್ಥಿ ಅವರು ಶನಿವಾರ ಹೇಳಿದ್ದಾರೆ.

ಇಂದು ಹತ್ರಾಸ್ ನಲ್ಲಿ ಸಂತ್ರಸ್ತೆ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ಪ್ರಾಥಮಿಕ ವರದಿ ನೀಡಿದ ಎರಡು ಗಂಟೆಗಳಲ್ಲೇ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಈ ಪ್ರದೇಶದ ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಹಲವು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಶುಕ್ರವಾರ ಆದೇಶಿಸಲಾಗಿದೆ ಎಂದರು.

"ಇದು ಅತ್ಯಂತ ದುಃಖದ ಘಟನೆ. ನಾವು ಕುಟುಂಬದ ಪ್ರತಿಯೊಬ್ಬರನ್ನು ಭೇಟಿ ಮಾಡಿದ್ದೇವೆ. ನಾವು ಅವರೊಂದಿಗೆ ಮಾತನಾಡಿದ್ದೇವೆ ಮತ್ತು ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿರುವುದಾಗಿ" ಅವಸ್ಥಿ ಸುದ್ದಿಗಾರರಿಗೆ ತಿಳಿಸಿದರು.

"ಎಸ್‌ಐಟಿ ತನಿಖೆ ನಡೆಯುತ್ತಿದೆ ಮತ್ತು ಅದು ತನ್ನ ಕೆಲಸವನ್ನು ಮುಂದುವರಿಸಲಿದೆ. ಕುಟುಂಬ ಸದಸ್ಯರು ಕೆಲವು ಸಮಸ್ಯೆಗಳನ್ನು ಎತ್ತಿದ್ದಾರೆ. ಅವರು ಯಾವ ಅಂಶಗಳು ಮತ್ತು ದೂರುಗಳನ್ನು ಎತ್ತಿದ್ದರೂ, ಎಸ್‌ಐಟಿ ಅವುಗಳನ್ನು ಗಮನಿಸುತ್ತದೆ ಮತ್ತು ಅವುಗಳಲ್ಲಿ ಪ್ರತಿಯೊಂದನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಅವಸ್ಥಿ ವಿವರಿಸಿದರು.

ಯೋಗಿ ಆದಿತ್ಯನಾಥ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಪ್ರತಿಪಕ್ಷಗಳು ಈ ಘಟನೆಯ ಬಗ್ಗೆ ಭಾರಿ ವಿವಾದ ಹುಟ್ಟುಹಾಕಿದ್ದರಿಂದ ಸಿಎಂ ಸೂಚನೆಯಂತೆ ಅವಸ್ಥಿ ಹಾಗೂ ಡಿಜಿಪಿ ಎಚ್ ಸಿ ಅವಸ್ತ್ಯಾ ಅವರು ಸಂತ್ರಸ್ತೆ ಕುಟಂಬ ಭೇಟಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT