ದೇಶ

ಉತ್ತರ ಪ್ರದೇಶ: ಕೊನೆಗೂ ಹತ್ರಾಸ್ ಗೆ ಭೇಟಿ ನೀಡಲು ಪ್ರಿಯಾಂಕಾ, ರಾಹುಲ್ ಗಾಂಧಿಗೆ ಅನುಮತಿ

Lingaraj Badiger

ನವದೆಹಲಿ: ಉತ್ತರ ಪ್ರದೇಶ ಸರ್ಕಾರ ಕೊನೆಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಭೇಟಿ ಮಾಡಲು ಶನಿವಾರ ಅನುಮತಿ ನೀಡಿದೆ.

ಕಳೆದ ಗುರುವಾರ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಹತ್ರಾಸ್ ಗೆ ತೆರಳುತ್ತಿದ್ದ ಈ ಇಬ್ಬರು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದರು. 

ಇಂದು ಮತ್ತೆ ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ದೆಹಲಿ- ನೋಯ್ಡಾ ಗಡಿಯಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದರು. ಆದರೆ ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದರು.ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಐವರಿಗೆ ಮಾತ್ರ ಹತ್ರಾಸ್ ಗೆ ತೆರಳಲು ಅನುಮತಿ ನೀಡಲಾಗಿದೆ.

ಹತ್ನಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದ್ದು, ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

SCROLL FOR NEXT