ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11,42,131 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,42,131 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅ.3ರವರೆಗೂ 7,89,92,534 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ಭಾರತದಲ್ಲಿ ನಿನ್ನೆ ಒಂದೇ ದಿನ 79,476 ಹೊಸ ಕೇಸ್'ಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ.