ಹತ್ರಾಸ್: ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆಗೆ ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ
ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ವೈ ಶ್ರೇಣಿ ಭದ್ರತೆ ನೀಡಬೇಕು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.
ಹತ್ರಾಸ್: ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ವೈ ಶ್ರೇಣಿ ಭದ್ರತೆ ನೀಡಬೇಕು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.
ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಆ ಕುಟುಂಬಕ್ಕೆ ವೈ ಶ್ರೇಣಿಯ ಭದ್ರತೆ ನೀಡದಿದ್ದಲ್ಲಿ ಇಲ್ಲಿ ಅವರಿಗೆ ಸುರಕ್ಷತೆ ಇಲ್ಲದಿರುವುದರಿಂದ ತಮ್ಮ ಮನೆಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿದರು.
ನಟಿ ಕಂಗನಾ ರಣಾವತ್ ಗೆ ವೈ ಶ್ರೇಣಿ ನೀಡುವುದಾದರೆ ಹತ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ ಅವರು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.