ದೇಶ

2021 ರ ಜುಲೈ ವೇಳೆಗೆ ಭಾರತದ 25 ಕೋಟಿ ಮಂದಿಗೆ ಕೊರೋನಾ ಲಸಿಕೆ ಪೂರೈಕೆಗೆ ಸರ್ಕಾರದ ಯೋಜನೆ

Srinivas Rao BV

ನವದೆಹಲಿ: 2021 ರ ಜುಲೈ ವೇಳೆಗೆ ಭಾರತದ 25 ಕೋಟಿ ಮಂದಿಗೆ ಕೊರೋನಾ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ. 

ಅ.04 ರಂದು ಸಾಮಾಜಿಕ ಜಾಲತಾಣದ ಮೂಲಕ ಸಂಡೇ ಸಂವಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಕೇಂದ್ರ ಸಚಿವರು, ಕೋವಿಡ್-19 ಗೆ ಸಂಬಂಧಿಸಿದಂತೆ ಮುನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿಗಳಿಗೆ ಪ್ರಥಮ ಆದ್ಯತೆಯಾಗಿ ಕೋವಿಡ್-19 ಲಸಿಕೆಗಳನ್ನು ನೀಡಲಾಗುತ್ತದೆ. ಈ ವಿಭಾಗದ ಆದ್ಯತೆಯ ನಾಗರಿಕರಿಗೆ ಕೋವಿಡ್-19 ಲಸಿಕೆ ಅಕ್ಟೋಬರ್ ಅಂತ್ಯದ ವೇಳೆಗೆ ಲಭ್ಯವಾಗಲಿದೆ ಎಂದು ಡಾ. ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. 

ಇನ್ನು ಸರ್ಕಾರ 2021 ರ ಜುಲೈ ವೇಳೆಗೆ 130 ಕೋಟಿ ಭಾರತೀಯರ ಪೈಕಿ 25 ಕೋಟಿ ಭಾರತೀಯರಿಗೆ ಕೋವಿಡ್-19 ಲಸಿಕೆಯನ್ನು ನೀಡುವ ಗುರಿ ಹೊಂದಿದೆ ಇದಕ್ಕಾಗಿ 400-500 ಡೋಸ್ ಲಸಿಕೆ ಸರ್ಕಾರ ಪಡೆದುಕೊಳ್ಳುತ್ತಿದೆ ಎಂದು ಹರ್ಷವರ್ಧನ್ ತಿಳಿಸಿದ್ದಾರೆ.

ಭಾರತೀತ ಲಸಿಕೆ ತಯಾರಿಕಾ ಸಂಸ್ಥೆಗಳಿಗೆ ಭಾರತ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತಿದೆ ಹಾಗೂ ಸಮಾನವಾದ ಲಭ್ಯತೆ ಇರುವುದರತ್ತ ಗಮನ ಹರಿಸಿದೆ ಎನ್ನುತ್ತಾರೆ ಹರ್ಷವರ್ಧನ್.

ಭಾರತದಲ್ಲಿ ಹಲವಾರು ಔಷಧ ಸಂಸ್ಥೆಗಳ ಕೊರೋನಾ ಲಸಿಕೆಯ ಕ್ಲಿನಿಕಲ್ ಟ್ರಯಲ್ ಗಳು ಅಂತಿಮ ಹಂತದಲ್ಲಿರುವಾಗ ಡಾ. ಹರ್ಷವರ್ಧನ್ ಅವರು ಈ ಮಾಹಿತಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. 

SCROLL FOR NEXT