ಶ್ರೇಯಸಿ ಸಿಂಗ್ 
ದೇಶ

ಬಿಜೆಪಿ ಸೇರಿದ ಅರ್ಜುನ ಪ್ರಶಸ್ತಿ ಪುರಸ್ಕೃತೆ, ಶೂಟರ್ ಶ್ರೇಯಸಿ ಸಿಂಗ್!

ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

ಪಾಟ್ನಾ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

ಆರ್‌ಜೆಡಿಗೆ ಸೇರ್ಪಡೆಗೊಳ್ಳುವ ಊಹಾಪೋಹಗಳಿಗೆ ಅಂತ್ಯ ಹಾಡಿರುವ ಬಿಹಾರ ಮೂಲದ ಅಂತಾರಾಷ್ಟ್ರೀಯ ಖ್ಯಾತಿಯ ಶೂಟರ್ ಮತ್ತು ಅರ್ಜುನ ಖೇಲ್ ಪ್ರಶಸ್ತಿ ಪುರಸ್ಕೃತ ಶ್ರೇಯಾಸಿ ಸಿಂಗ್ ಅವರು ದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಬಿಜೆಪಿಗೆ ಸೇರಿಕೊಂಡಿದ್ದಾರೆ. 

ದಿವಂಗತ ಮಾಜಿ ಕೇಂದ್ರ ಸಚಿವ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಬಂಕಾ ಸಂಸದ ಪುತುಲ್ ಸಿಂಗ್ ಅವರ ಪುತ್ರಿ. ಅವರು ಅನೇಕ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಂಸೆ ಮತ್ತು ಪದಕಗಳನ್ನು ಗೆದ್ದಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಶ್ರೇಯಸಿ ಸಿಂಗ್ ಪಕ್ಷಕ್ಕೆ ಸೇರಿದರು. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಶೂಟಿಂಗ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ ಮತ್ತು 2014 ರಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT