ರಶೀದ್ ಮಸೂದ್ 
ದೇಶ

ಮಾಜಿ ಕೇಂದ್ರ ಸಚಿವ ರಶೀದ್ ಮಸೂದ್ ನಿಧನ

ಹಿರಿಯ ರಾಜಕಾರಣಿ, ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ  ಖಾಜಿ ರಶೀದ್ ಮಸೂದ್(73) ನಿಧನ ಹೊಂದಿದ್ದಾರೆ.

ನವದೆಹಲಿ: ಹಿರಿಯ ರಾಜಕಾರಣಿ, ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ  ಖಾಜಿ ರಶೀದ್ ಮಸೂದ್(73) ನಿಧನ ಹೊಂದಿದ್ದಾರೆ.

ಒಂಬತ್ತು ಬಾರಿ ಲೋಕಸಭೆ, ರಾಜ್ಯಸಭೆ ಸದಸ್ಯರಾಗಿದ್ದ ರಶೀದ್ ವಿಪಿ ಸಿಂಗ್ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು.

ಕೊರೋನಾ ಪಾಸಿಟಿವ್ ಇದ್ದ ಹಿನ್ನೆಲೆ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿತ್ತು. ಹೃದಯ, ಮೂತ್ರಪಿಂಡ ಕಾಯಿಲೆಗಳಿಂದಲೂ ಬಳಲಿದ್ದ ರಶೀದ್ ಅವರಿಗೆ ಕೊರೋನಾದಿಂದ ಚೇತರಿಸಿಕೊಂಡ ನಂತರವೂ ಚಿಕಿತ್ಸೆ ಮುಂದುವರಿದಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಿಗ್ಗೆ ರೂರ್ಕಿಯಲ್ಲಿ ನಿಧನರಾಗಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ರಶೀದ್ ಐದು ದಶಕಗಳ ರಾಜಕೀಯ ಪ್ರಯಾಣದಲ್ಲಿ ಅನೇಕ ಜವಾಬ್ದಾರಿಯುತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು 2012 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT