ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 74,442 ಹೊಸ ಸೋಂಕು ಪ್ರಕರಣಗಳು ಪತ್ತೆ

Srinivasamurthy VN

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 74,442 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 903 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 74,442 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 66,23,816 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಈ ವರೆಗೂ ಚೇತರಿಸಿಕೊಂಡ ಸೋಂಕಿತರ ಸಂಖ್ಯೆ 55,86,704ಕ್ಕೆ ಏರಿಕೆಯಾಗಿದೆ.

ಅಂತೆಯೇ ನಿನ್ನೆ ಒಂದೇ ದಿನ ದೇಶಾದ್ಯಂತ 903 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,02,685ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 9,34,427 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ 9,89,860 ಕೋವಿಡ್ ಪರೀಕ್ಷೆ
ಇನ್ನು ದೇಶಾದ್ಯಂತ ನಿನ್ನೆ 9,89,860  ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಒಟ್ಟಾರೆ 7,99,82,394 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

SCROLL FOR NEXT