ನವದೆಹಲಿ: ಭಾರತದಲ್ಲಿ ಮಂಗಳವಾರ 61,267 ಮಂದಿಯಲ್ಲಿ ಕೊರೋನಾ ಸೋಂಂಕು ದೃಢಪಟ್ಟಿದ್ದು, 884 ಮಂದಿ ಬಲಿಯಾಗಿದ್ದಾರೆ. ಸಾಮಾನ್ಯವಾಗಿ ದೇಶದಲ್ಲಿ ಪ್ರತೀನಿತ್ಯ 70ರಿಂದ 80 ಸಾವಿರ ಹೊಸ ಸೋಂಕಿತರು ಪತ್ತೆಯಾಗುತ್ತಿದ್ದರು. ಆದರೆ, ಹಲವು ದಿನಗಳ ಬಳಿಕ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.
61,267 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 66,85,083ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಒಂದೇ ದಿನ 884 ಮಂದಿ ಸಾವನ್ನಪ್ಪುವುದರೊಂದಿಗೆ ದೇಶದಲ್ಲಿ ಈ ವರೆಗೂ ಮಹಾಮಾರಿ ವೈರಸ್ 1,03,569 ಮಂದಿ ಬಲಿ ಪಡೆದುಕೊಂಡಿದೆ.
ಇನ್ನು 66,85,083 ಮಂದಿ ಒಟ್ಟು ಸೋಂಕಿತರ ಪೈಕಿ 56,62,491 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 9,19,023 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ದೇಶಾದ್ಯಂತ 24 ಗಂಟೆಗಳಲ್ಲಿ 10,89,403 ಕೋವಿಡ್ ಪರೀಕ್ಷೆ, ಒಟ್ಟಾರೆ 7,02,69,975 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 10,89,403 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 10,89,403 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅ.5 ರವರೆಗೂ 8,10,71,797 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.