ಬಿಹಾರದಲ್ಲಿ ನಿತೀಶ್ ಗೆ ಎನ್ ಡಿಎ ಬೆಂಬಲ: ಜೆಡಿಯುಗೆ 122, ಬಿಜೆಪಿಗೆ 121 ಸೀಟು ಹಂಚಿಕೆ
ಬಿಹಾರ ವಿಧಾನಸಭಾ ಚುನಾವಣೆಗಾಗಿ ಸೀಟು- ಹಂಚಿಕೆ ಸೂತ್ರವನ್ನು ಆಡಳಿತರೂಢ ಎನ್ ಡಿಎ ಮಂಗಳವಾರ ಘೋಷಿಸಿದೆ. 243 ಸ್ಥಾನಗಳ ಪೈಕಿ ಜೆಡಿಯು 122, ಬಿಜೆಪಿ 121 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗಾಗಿ ಸೀಟು- ಹಂಚಿಕೆ ಸೂತ್ರವನ್ನು ಆಡಳಿತರೂಢ ಎನ್ ಡಿಎ ಮಂಗಳವಾರ ಘೋಷಿಸಿದೆ. 243 ಸ್ಥಾನಗಳ ಪೈಕಿ ಜೆಡಿಯು 122, ಬಿಜೆಪಿ 121 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಯಕತ್ವವನ್ನು ಬಿಜೆಪಿ ಬೆಂಬಲಿಸಿದ್ದು, ಬಂಡಾಯ ಎದಿದ್ದ ಎಲ್ ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವನ್ ಅವರ ನಡೆಯನ್ನು ಖಂಡಿಸಿದೆ.
ಸಮಾನ ರೀತಿಯಲ್ಲಿ ಉಭಯ ಪಕ್ಷಗಳು ಸೀಟು ಹಂಚಿಕೆ ಮಾಡಿಕೊಂಡಿರುವುದಾಗಿ ಜೆಡಿಯು ಮತ್ತು ಬಿಜೆಪಿಯ ಉನ್ನತ ಮಟ್ಟದ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜೆಡಿಯುನ 122 ಸ್ಥಾನಗಳ ಪೈಕಿಯಲ್ಲಿ ಏಳು ಸ್ಥಾನಗಳಲ್ಲಿ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ ಪಕ್ಷಕ್ಕೆ ನೀಡಲು ನಿರ್ಧರಿಸಲಾಗಿದೆ. ಉಳಿದ 121 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ನಿತೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಎಲ್ ಜೆಪಿ ಕೇಂದ್ರದಲ್ಲಿ ನಮ್ಮ ಮೈತ್ರಿ ಪಕ್ಷವಾಗಿದೆ. ಆದರೆ, ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ಸಂಜೀವ್ ಜೈಸ್ವಾಲ್ ಹೇಳಿದರು.
ಬಿಹಾರದಲ್ಲಿ ಜೆಡಿಯು ಮೈತ್ರಿ ಪಕ್ಷಗಳನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದೆ. ಜೆಡಿಯು ಬೆಂಬಲವಿಲ್ಲದೆ ರಾಮ್ ವಿಲಾಸ್ ಪಾಸ್ವನ್ ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುತಿತ್ತೆ ಎಂದು ನಿತೀಶ್ ಕುಮಾರ್ ತಿಳಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.