ದೇಶ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ, ಸೋದರನಿಗೆ ಅಕ್ಟೋಬರ್ 20 ರವರೆಗೆ ಜೈಲು ಖಾಯಂ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್‌ಡಿಪಿಎಸ್ ಕೋರ್ಟ್ ಮಂಗಳವಾರ  ಆದೇಶಿಸಿದೆ.

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್‌ಡಿಪಿಎಸ್ ಕೋರ್ಟ್ ಮಂಗಳವಾರ  ಆದೇಶಿಸಿದೆ.

ಮುಂಬೈನ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ನ್ಯಾಯಾಲಯ (ಎನ್‌ಡಿಪಿಎಸ್) ರಿಯಾ ಚಕ್ರವರ್ತಿ ಹಾಗೂ ಅವರ ಸೋದರನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದೆ.

ಈ ಪ್ರಕರಣದಲ್ಲಿ ರಿಯಾ, ಶೋಯಿಕ್  ಅವರಲ್ಲದೆ ಇತರ 18 ಮಂದಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿದೆ.

ವರದಿಗಳ ಪ್ರಕಾರ, ಎನ್‌ಸಿಬಿ ತನ್ನ ಸೂಚನೆಯಂತೆ ರಿಯಾ ಹಾಗೂ ಆಕೆಯ ಸೋದರ ಸುಶಾಂತ್ ಗೆ ಹಣಕಾಸು ಮತ್ತು ಡ್ರಗ್ಸ್ ವ್ಯವಸ್ಥೆ ಕಲ್ಪಿಸಿದ್ದರೆಂದು ಹೇಳಿದೆ. ಆದರೆ ರಿಯಾ ಮಾತ್ರ ತನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ವಾದಿಸಿದ್ದಾರೆ. 

ಏತನ್ಮಧ್ಯೆ, ಡ್ರಗ್ಸ್ ಪ್ರಕರಣದಲ್ಲಿ ರಿಯಾ, ಶೋಯಿಕ್ ಮತ್ತಿತರರ  ಜಾಮೀನು ಅರ್ಜಿಯ ಕುರಿತು ಬಾಂಬೆ ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!