ರಣ್ ಜೀತ್ ಬಹದ್ದೂರ್ ಶ್ರೀವಾಸ್ತವ ಕ 
ದೇಶ

ಹತ್ರಾಸ್ ಗ್ಯಾಂಗ್ ರೇಪ್ ಯುವತಿಗೆ ಆರೋಪಿಯೊಂದಿಗೆ ಸಂಬಂಧ ಇತ್ತು: ಬಿಜೆಪಿ ನಾಯಕ

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ಹೇಳಿಕೆ ನೀಡಿದ್ದು, ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿದ್ದಾರೆ.

ಬಾರಾಬಂಕಿ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ಹೇಳಿಕೆ ನೀಡಿದ್ದು, ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿದ್ದಾರೆ.

ಬಾರಾಬಂಕಿಯ ನಾಯಕ ರಣ್ ಜೀತ್ ಬಹದ್ದೂರ್ ಶ್ರೀವಾಸ್ತವ ಅವರ ವಿರುದ್ಧ 44 ಕ್ರಿಮಿನಲ್ ಮೊಕದ್ದಮೆಗಳಿದ್ದು, ಇವರು ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆ ಕುರಿತು ಮಾತನಾಡಿದ್ದಾರೆ. 

19 ವರ್ಷದ ದಲಿತ ಯುವತಿಯ ಮೇಲೆ ಭೀಕರ ದೌರ್ಜನ್ಯ ಎಸಗಿದ ಮೇಲ್ವರ್ಗದ ಯುವಕರು ಮುಗ್ಧರು, ಇದರಲ್ಲಿ ಯುವತಿಯೇ ದಾರಿತಪ್ಪಿದ್ದಳು ಎಂದು ಹೇಳಿದ್ದಾರೆ. ವಿವಾದಾತ್ಮಕವಾಗಿಯೇ ಸುದ್ದಿಯಲ್ಲಿರುವ ರಣ್ ಜೀತ್ ಬಹದ್ದೂರ್ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. 

ಯುವತಿಗೆ ಆರೋಪಿಯೊಂದಿಗೇ ಸಂಬಂಧವಿತ್ತು, ಅದಕ್ಕಾಗಿಯೇ ಆಕೆ  ಕೃಷಿ ಜಮೀನಿಗೆ ಬರಲು ಆರೋಪಿಯನ್ನು ಬರಲು ಹೇಳಿದ್ದರು. ಇಂತಹ ಹೆಣ್ಣುಮಕ್ಕಳೇ ಕಬ್ಬಿನ ಗದ್ದೆ ಹಾಗೂ ಅರಣ್ಯಗಳಲ್ಲಿ ಸಾವನ್ನಪ್ಪುತ್ತಾರೆ ಎಂದು ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆದರೆ ಈ ಯುವಕರು ಮುಗ್ಧರು ಎಂದು ಸ್ಪಷ್ಟವಾಗಿ ಹೇಳಬಲ್ಲೆ, ಸಿಬಿಐ ಚಾರ್ಜ್ ಶೀಟ್ ದಾಖಲಿಸುವವರೆಗೆ ಅವರನ್ನು ಬಿಡುಗಡೆ ಮಾಡಬೇಕು ಅಲ್ಲಿಯವರೆಗೆ ಅವರನ್ನು ಜೈಲಿನಲ್ಲಿರಿಸಿದರೆ ಅವರ ಕಳೆದುಹೋದ ಯೌವನವನ್ನು ಯಾರು ಹಿಂತಿರುಗಿಸುತ್ತಾರೆ? ಸರ್ಕಾರ ಪರಿಹಾರ ನೀಡಲಿದೆಯೇ? ಎಂದು ರಣ್ ಜೀತ್ ಬಹದ್ದೂರ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು