ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 2 ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಶೋಪಿಯಾನ್ ಜಿಲ್ಲೆಯ ಸುಗನ್ ಜೈನಪೊರಾ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆ ಸ್ಥಳವನ್ನು ಸುತ್ತುವರೆದು ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.