ಸುಶೀಲ್ ಮೋದಿ 
ದೇಶ

ಏನೇ ಆಗಲಿ, ಹೋಗಲಿ ನಿತೀಶ್ ಕುಮಾರ್ ಅವರೇ ನಮ್ಮ ಮುಖ್ಯಮಂತ್ರಿ: ಸುಶೀಲ್ ಮೋದಿ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದರೂ ನಿತೀಶ್‌ ಕುಮಾರ್‌ ಅವರೇ ಮುಖ್ಯಮಂತ್ರಿ ಎಂದುಬಿಹಾರ ಡಿಸಿಎಂ ಸುಶೀಲ್‌ ಕುಮಾರ್‌ ಮೋದಿ ಘೋಷಿಸಿದ್ದಾರೆ.

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದರೂ ನಿತೀಶ್‌ ಕುಮಾರ್‌ ಅವರೇ ಮುಖ್ಯಮಂತ್ರಿ ಎಂದುಬಿಹಾರ ಡಿಸಿಎಂ ಸುಶೀಲ್‌ ಕುಮಾರ್‌ ಮೋದಿ ಘೋಷಿಸಿದ್ದಾರೆ.

ಕೇಂದ್ರ ಸಚಿವ ರಾಂ ವಿಲಾಸ್‌ ಪಾಸ್ವಾನ್‌ ನೇತೃತ್ವದ ಲೋಕಜನ ಶಕ್ತಿ ಪಕ್ಷ ನಿತೀಶ್‌ ಕುಮಾರ್‌ ನಾಯಕತ್ವದ ವಿರುದ್ಧ ಆಕ್ಷೇಪ ಮಾಡಿದ್ದು ಸರಿಯಲ್ಲ ಎಂಬುದನ್ನು ಪರೋಕ್ಷವಾಗಿ ಪ್ರಸ್ತಾವ ಮಾಡಿದ್ದಾರೆ. ಜೊತೆಗೆ ನಿತೀಶ್ ಕುಮಾರ್ ಅವರ ನಾಯಕತ್ವವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

‘ನಿತೀಶ್‌ ಕುಮಾರ್‌ ಅವರನ್ನು ನಾಯಕರನ್ನಾಗಿ ಒಪ್ಪಿಕೊಳ್ಳುವ ಪಕ್ಷಗಳಿಗೆ ಮಾತ್ರ ಬಿಹಾರ ಎನ್‌ಡಿಎ ಘಟಕದಲ್ಲಿ ಸ್ಥಾನ’ ಎಂಬುದನ್ನೂ ಸುಶೀಲ್‌ ಮೋದಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಹಾರ ವ್ಯಾಪ್ತಿಯಲ್ಲಿ ಎನ್‌ಡಿಎಯಿಂದ ಹೊರ ನಡೆದಿರುವ ಎಲ್‌ಜೆಪಿಗೆ ಟಾಂಗ್‌ ನೀಡಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್ ಅವರ ಸಮ್ಮುಖದಲ್ಲೇ ಚಿರಾಗ್ ಪಾಸ್ವಾನ್ ಈ ರೀತಿಯ ಹೆಜ್ಜೆ ಇಟ್ಟಿದ್ದು  ಸರಿಯಿಲ್ಲ ಎಂದು ಸುಶೀಲ್ ಮೋದಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ