ಕುಲಭೂಷಣ್ ಜಾದವ್ 
ದೇಶ

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕ್ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು: ಭಾರತ

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್‌ಗೆ ಸಂಬಂಧಿಸಿದ ಪ್ರಕರಣದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಪಾಕಿಸ್ತಾನ ವಿಫಲವಾಗಿದೆ ಎಂದು ಭಾರತ ಹೇಳಿದ್ದು ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ಆದೇಶದಂತೆ ಅಡ್ಡಿ ಆತಂಕ ಇಲ್ಲದ ದೂತಾವಾಸದ ಪ್ರವೇಶಕ್ಕೆ ಒತ್ತಾಯಿಸಿದೆ.

ನವದೆಹಲಿ: ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್‌ಗೆ ಸಂಬಂಧಿಸಿದ ಪ್ರಕರಣದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಪಾಕಿಸ್ತಾನ ವಿಫಲವಾಗಿದೆ ಎಂದು ಭಾರತ ಹೇಳಿದ್ದು ಅಂತಾರಾಷ್ಟ್ರೀಯ ನ್ಯಾಯಮಂಡಳಿಯ ಆದೇಶದಂತೆ ಅಡ್ಡಿ ಆತಂಕ ಇಲ್ಲದ ದೂತಾವಾಸದ ಪ್ರವೇಶಕ್ಕೆ ಒತ್ತಾಯಿಸಿದೆ.

ಪಾಕಿಸ್ತಾನದ ನ್ಯಾಯಾಲಯವು ಕುಲಭೂಷಣ್ ಮರಣದಂಡನೆ ವಿರುದ್ಧ ಪರಿಶೀಲನಾ ಅರ್ಜಿಯನ್ನು ವಿಚಾರಣೆಗೆ ಒಳಪಡಿಸುತ್ತಿದೆ.

ಈ ಪ್ರಕರಣದಲ್ಲಿ ಜಾಧವ್ ಅವರನ್ನು ಪ್ರತಿನಿಧಿಸಲು ಭಾರತೀಯ ವಕೀಲರೊಬ್ಬರನ್ನು ನೇಮಕ ಮಾಡುವಂತೆ ಭಾರತ ಒತ್ತಡ ಹೇರುತ್ತಿದ್ದು, 2019ರಲ್ಲಿ ತೀರ್ಪಿನಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಆದೇಶಿಸಿದಂತೆ ಆತನಿಗೆ ಅಡ್ಡಿಯಿಲ್ಲದೆ ದೂತಾವಾಸದ ಪ್ರವೇಶ ಕೋರಿದೆ.

"ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನ ವಿಫಲವಾಗಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒದಗಿಸುವುದು ಮತ್ತು ಅವರಿಗೆ ಯಾವುದೇ ಅಡೆತಡೆಯಿಲ್ಲದ, ಬೇಷರತ್ತಾದ ಮತ್ತು ಅಡೆತಡೆಯಿಲ್ಲದ ದೂತವಾಸ ಪ್ರವೇಶವನ್ನು ಒದಗಿಸಬೇಕಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಈ ಪ್ರಕರಣದಲ್ಲಿ ಜಾಧವ್ ಅವರನ್ನು ಪ್ರತಿನಿಧಿಸಲು ವಕೀಲರನ್ನು ನೇಮಕ ಮಾಡಲು ಭಾರತ ವಿಫಲವಾಗಿದೆ ಎಂದು ಪಾಕಿಸ್ತಾನ ಅಧಿಕಾರಿಗಳು ಇಸ್ಲಾಮಾಬಾದ್ ಹೈಕೋರ್ಟ್‌ಗೆ(ಐಎಚ್‌ಸಿ) ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT