ದೇಶ

ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್‌ ಸ್ವಾಮಿ ಎನ್ಐಎ ವಶಕ್ಕೆ

Srinivasamurthy VN

ನವದೆಹಲಿ: ಭೀಮಾ ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಹೋರಾಟಗಾರ ಫಾದರ್‌ ಸ್ಟ್ಯಾನ್‌ ಸ್ವಾಮಿ(82 ವರ್ಷ) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಂಚಿಯಲ್ಲಿ ಬಂಧಿಸಿದೆ. 

ಈ ಹಿಂದೆ ಇದೇ ಭೀಮಾ ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಸ್ವಾಮಿ ಅವರನ್ನು ಪ್ರಶ್ನಿಸಿರುವ ಪುಣೆ ಪೊಲೀಸ್ ಮತ್ತು ಎನ್‌ಐಎ ತಂಡದರು, ಗುರುವಾರ ಅವರನ್ನು ರಾಂಚಿ ಮನೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು  ಮುಂಬೈಗೆ ವರ್ಗಾಯಿಸಲಾಗುವುದು  ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಿಷೇಧಿತ ಸಿಪಿಐ(ಮಾವೊವಾದಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ. ಸ್ಟ್ಯಾನ್‌ ಸ್ವಾಮಿ ಮಾತ್ರವಲ್ಲದೆ ಈ ಪ್ರಕರಣದಲ್ಲಿ ಹದಿನಾರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ ಮತ್ತು ಭಯೋತ್ಪಾದಕಾ ನಿಗ್ರಹ ಕಾಯ್ದೆ – ಯುಪಿಎಪಿ ಅಡಿಯಲ್ಲಿ ಇವರ ವಿರುದ್ಧ  ಪ್ರಕರಣ ದಾಖಲಿಸಲಾಗಿದೆ.

SCROLL FOR NEXT