ದೇಶ

ಭೀಮಾ ಕೋರೆಗಾಂವ್‌ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬು ಸೇರಿ 8 ಮಂದಿ ವಿರುದ್ಧ ಚಾರ್ಜ್ ಶೀಟ್

Lingaraj Badiger

ಮುಂಬೈ: ಎರಡು ವರ್ಷದ ಹಿಂದೆ ನಡೆದ ಭೀಮಾ-ಕೋರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಹನಿ ಬಾಬು, ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ, ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ, ಗೋವಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಪ್ರಾಧ್ಯಾಪಕ ಆನಂದ್ ತೇಲ್ತುಂಬ್ಡೆ, ಜ್ಯೋತಿ ಜಗ್ತಾಪ್, ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

ಎಂಟು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ ಗೆ ಇಂದು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಎನ್‌ಐಎ ವಕ್ತಾರೆ ಮತ್ತು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಸೋನಿಯಾ ನಾರಂಗ್ ಅವರು ತಿಳಿಸಿದ್ದಾರೆ.

2018ರ ಜನವರಿ 1ರಂದು ಭೀಮಾ-ಕೋರೆಗಾಂವ್‌ ಯುದ್ಧದ 200ನೇ ವರ್ಷದ ವಿಜಯೋತ್ಸವದ ವೇಳೆ ನಡೆದ ಹಿಂಸಾಚಾರದಲ್ಲಿ ಒಬ್ಬ ಮೃತಪಟ್ಟು, 30 ಪೊಲೀಸರು ಗಾಯಗೊಂಡಿದ್ದರು.

SCROLL FOR NEXT