ಸುಪ್ರೀಂ ಕೋರ್ಟ್ 
ದೇಶ

ನಕಲಿ ಟಿಆರ್‌ಪಿ ಹಗರಣ: ಮುಂಬೈ ಪೊಲೀಸರ ಮುಂದೆ ಹಾಜರಾಗದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಿಪಬ್ಲಿಕ್ ಟಿವಿ

ಸಮನ್ಸ್ ಹೊರತಾಗಿಯೂ ಟಿಆರ್‌‌ಪಿ ದಂಧೆಯೆಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಿಲ್ಲ ಅಲ್ಲದೆ ಈ ಪ್ರಕರಣದಲ್ಲಿ ಚಾನೆಲ್ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಸಮನ್ಸ್ ಹೊರತಾಗಿಯೂ ಟಿಆರ್‌‌ಪಿ ದಂಧೆಯೆಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಿಲ್ಲ ಅಲ್ಲದೆ ಈ ಪ್ರಕರಣದಲ್ಲಿ ಚಾನೆಲ್ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಾನೆಲ್‌ನ ಸಿಎಫ್‌ಒ ಶಿವ ಸುಬ್ರಮಣ್ಯಂ ಸುಂದರಂ ಅವರ ವಿರುದ್ಧ ಶುಕ್ರವಾರ ಸಮನ್ಸ್ ಜಾರಿಗೊಳಿಸಲಾಗಿ ಸಹ ಸುಪ್ರೀಂ ಕೋರ್ಟ್ ವಿಚಾರಣೆ ಇನ್ನೊಂದು ವಾರ ಇರುವ ಹಿನ್ನೆಲೆಯಲ್ಲಿ ಅವರ ಹೇಳಿಕೆದಾಖಲಿಸದಂತೆ ಪೊಲೀಸರಿಗೆ ಮನವಿ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆದಾಗ್ಯೂ, ಮ್ಯಾಡಿಸನ್ ವರ್ಲ್ಡ್ ಮತ್ತು ಮ್ಯಾಡಿಸನ್ ಕಮ್ಯುನಿಕೇಷನ್ಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸ್ಯಾಮ್ ಬಲ್ಸಾರಾ ಶನಿವಾರ ಅಪರಾಧ ವಿಭಾಗದ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಅವರು ಹೇಳಿದರು.

ಮುಂಬೈ ಅಪರಾಧ ವಿಭಾಗದ ಅಪರಾಧ ಗುಪ್ತಚರ ಘಟಕ (ಸಿಐಯು) ಸುಂದರಂ ವಿರುದ್ಧ ಸಮನ್ಸ್ ಜಾರಿಗೊಳಿಸಿತ್ತು ಮತ್ತು ಶನಿವಾರ ಬೆಳಿಗ್ಗೆ 11 ಗಂಟೆಗೆ ತನಿಖೆಗೆ ಆಗಮಿಸಲು ತಿಳಿಸಲಾಗಿತ್ತು. "ಆದರೆ, ಅವರು ತನಿಖಾ ತಂಡದ ಮುಂದೆ ಹಾಜರಾಗಲಿಲ್ಲ. ಚಾನೆಲ್ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ ಮತ್ತು ಒಂದು ವಾರದೊಳಗೆ ಈ ಬಗ್ಗೆ ವಿಚಾರಣೆ ನಡೆಯಲಿದೆ ಎಂದು ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಇದನ್ನು ಉಲ್ಲೇಖಿಸಿ ಅವರು ತಮ್ಮ ಹೇಳಿಕೆಯನ್ನು ದಾಖಲಿಸದಂತೆ ಪೊಲೀಸರಿಗೆ ಮನವಿ ಮಾಡಿದರು , "ಅಧಿಕಾರಿ ಹೇಳಿದರು.

ಸುಂದರಂ ಅವರಿಗೆ  "ಈ ವಿಷಯದ ಕೆಲವು ಸಂಗತಿಗಳು ಮತ್ತು ಸನ್ನಿವೇಶದ ಅರಿವಿದೆ.ಹಾಗೂ ಅದನ್ನು ತಿಳಿಯುವ ಅಗತ್ಯವಿದೆ"

ಅಪರಾಧ ಶಾಖೆಯ ಸಿಐಯು ನಕಲಿ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್‌‌ಪಿ) ದಂಧೆ ಪ್ರಕರಣದ ತನಿಖೆ ನಡೆಸುತ್ತಿದೆ. 

ಇವರಲ್ಲದೆ ಮರಾಠಿ ಚಾನೆಲ್‌ಗಳಾದ 'ಫಕ್ತ್ ಮರಾಠಿ' ಮತ್ತು 'ಬಾಕ್ಸ್ ಸಿನೆಮಾ' ಮತ್ತು ಒಂದೆರಡು ಜಾಹೀರಾತು ಸಂಸ್ಥೆಗಳ ಅಕೌಂಟೆಂಟ್‌ಗಳನ್ನು ಸಹ ಪೊಲೀಸರು ತನಿಖೆಗಾಗಿ ಕರೆಸಿದ್ದಾರೆ ಎಂದು ಅವರು ಹೇಳಿದರು. ಈ ಪ್ರಕರಣದಲ್ಲಿ ಫಕ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT