ದೇಶ

ಕುಲ್ಗಾಂನಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ

Manjula VN

ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಕುಲ್ಗಾಂ ಜಿಲ್ಲೆಯ ಚಿಂಗಾಮ್ ಎಂಬ ಪ್ರದೇಶದಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು. 

ಇದರಂತೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆ ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

SCROLL FOR NEXT