ಖುಷ್ಬೂ ಸುಂದರ್ 
ದೇಶ

ಕಾಂಗ್ರೆಸ್ ಗೆ ನಟಿ ಖುಷ್ಬೂ ಗುಡ್ ಬೈ, ನಾಳೆ ಬಿಜೆಪಿ ಸೇರ್ಪಡೆ?

ಹಿರಿಯ ನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದ್ದು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚೆನ್ನೈ: ಹಿರಿಯ ನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದ್ದು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬೂ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಗೆ ವಿದಾಯ ಹೇಳಿದ್ದು, ನಾಳೆ ಬೆಳಿಗ್ಗೆ ಅವರು ಬಿಜೆಪಿಗೆ ಸೇರಲಿದ್ದಾರೆ. ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ನಾಳೆ ದೆಹಲಿಗೆ ತೆರಳಲಿರುವ ಖುಷ್ಬೂ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರೆ  ಹಿರಿಯ ನಾಯಕರನ್ನು ಭೇಟಿ ಮಾಡಿ  ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಖುಷ್ಬೂ ಅವರೊಂದಿಗೆ ಐಆರ್ ಎಸ್ ಅಧಿಕಾರಿ, ಖ್ಯಾತ ಯೂಟ್ಯೂಬರ್ ಒಬ್ಬರು ಕೂಡ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

2014ರ ಸೆಪ್ಟೆಂಬರ್ ನಲ್ಲಿ ಡಿಎಂಕೆ ಪಕ್ಷ ತೊರೆದಿದ್ದ ಖುಷ್ಬೂ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ ಕಳೆದೊಂದು ತಿಂಗಳಿನಿಂದ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಊಹಾಪೋಹ ಎದ್ದಿದ್ದವು. ಕಳೆದವಾರ ಖುಷ್ಬೂ ಅವರು ಬಿಜೆಪಿ ಸೇರ್ಪಡೆ ವಿಚಾರವನ್ನು ತಳ್ಳಿ ಹಾಕಿದ್ದರು. ಆದರೆ  ದಿಢೀರ್ ಬೆಳವಣಿಗೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿಲಿರುವ ಖುಷ್ಬೂ ಅವರು ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!