ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಾರಾಷ್ಟ್ರ: ಹೊಸದಾಗಿ 10,792 ಮಂದಿಗೆ ಕೊರೋನಾ ಸೋಂಕು, 309 ಮಂದಿ ಸಾವು

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಭಾನುವಾರ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಸಂಗ್ರಹ ಚಿತ್ರ
Srinivasa Murthy VN
Updated On : 11 Oct 2020, 10:33 pm

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಭಾನುವಾರ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಮಹಾರಾಷ್ಟ್ರದಲ್ಲಿ ಇಂದು 10,792 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 15,28,226ಕ್ಕೆ ಏರಿಕೆಯಾಗಿದೆ. 2,21,174 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೂ 76,43,584 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ  ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮಹಾಮಾರಿಗೆ ಇಂದು 309 ಮಂದಿ ಬಲಿಯಾಗಿದ್ದು, ಇದರೊಂದಿಗೆ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 40,349ಕ್ಕೆ ಏರಿಕೆಯಾಗಿದೆ. ಇಂದು 10,461 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಗುಣಮುಖರ ಸಂಖ್ಯೆ 12,66,240ಕ್ಕೆ ಏರಿಕೆಯಾಗಿದೆ. ಅಂತೆಯೇ  ರಾಜ್ಯದಲ್ಲಿನ ಗುಣಮುಖ ಪ್ರಮಾಣ ಶೇ.82.86ಕ್ಕೆ ಏರಿಕೆಯಾಗಿದೆ. ಅಂತೆಯೇ ಸಾವಿನ ಪ್ರಮಾಣ ಶೇ.2.64ಕ್ಕೆ ಏರಿಕೆಯಾಗಿದೆ.

Advertisement

Advertisement

ಮುಂಬೈನಲ್ಲಿ 2199 ಹೊಸ ಪ್ರಕರಣಗಳು ಮತ್ತು 42 ಸಾವುಗಳು ವರದಿಯಾಗಿದ್ದು, ಇದರೊಂದಿಗೆ ವಾಣಿಜ್ಯ ನಗರಿಯ ಸೋಂಕಿತರ ಸಂಖ್ಯೆ 2,29,450 ಮತ್ತು ಸಾವಿನ ಸಂಖ್ಯೆ 9,430ಕ್ಕೆ ತಲುಪಿದೆ. ಮುಂಬೈನಲ್ಲಿ ಈ ವರೆಗೂ 1,93,805 ಮಂದಿ ಸೋಂಕಿತರು ಗುಣಮುಖರಾಗಿದ್ದು, 22,919 ಮಂದಿ ಸೋಂಕಿತರು ಚಿಕಿತ್ಸೆ  ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement