ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಾರಾಷ್ಟ್ರದಲ್ಲಿ ಇಂದು 7,089 ಹೊಸ ಕೋವಿಡ್ ಪ್ರಕರಣಗಳು ಪತ್ತೆ!

ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಇಂದು 7,089 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಸಂಗ್ರಹ ಚಿತ್ರ
Srinivasa Murthy VN
Updated On : 12 Oct 2020, 11:06 pm

ಮುಂಬೈ: ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಇಂದು 7,089 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 7,089 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 15,35,315ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 15,656 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ  12,81,896ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 2,12,439 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಇಂದು 165 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಈ ವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 40,514ಕ್ಕೆ ಏರಿಕೆಯಾಗಿದೆ. 

Advertisement

Advertisement

ಮುಂಬೈನಲ್ಲಿ 1,620 ಮಂದಿ ಹೊಸ ಸೋಂಕಿತರು
ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಇಂದು 1,620 ಮಂದಿ ಸೋಂಕಿತರು ಪತ್ತೆಯಾಗಿದ್ದು, ಆ ಮೂಲಕ ಮುಂಬೈನಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,31,070ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಮುಂಬೈನಲ್ಲಿ 1,968 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ 1,95,773 ಮಂದಿ  ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಮುಂಬೈನಲ್ಲಿ 36 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಸಾವಿಗೀಡಾದ ಸೋಂಕಿತರ ಸಂಖ್ಯೆ 9466ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಮುಂಬೈನಲ್ಲಿ 22,693 ಸಕ್ರಿಯ ಪ್ರಕರಣಗಳಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement