ದೇಶ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತನ ಬಂಧನ

Nagaraja AB

ಬದೌನ್: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬದೌನ್ ನಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಹಿಳೆ ನೀಡಿರುವ ದೂರಿನ ಅನ್ವಯ ಸಹಸ್ವಾನ್ ಬಿಜೆಪಿ ಸ್ಥಳೀಯ ಅಧ್ಯಕ್ಷ ವಿಪಿನ್ ಮಾಲಿ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಭಾನುವಾರ ರಾತ್ರಿ ಆತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಮಾಲಿಯನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೂರು ದಿನಗಳ ಹಿಂದೆ ಬಲವಂತಾಗಿ ಮಹಿಳೆ ಮೇಲೆ ದೌರ್ಜನ್ಯಕ್ಕೆಆರೋಪಿ ಯತ್ನಿಸಿದ್ದಾನೆ. ನಂತರ ಆಕೆ ಚೀರಾಟ ನಡೆಸಿದ ನಂತರ ಆತ ಅಲ್ಲಿಂದ ಪರಾರಿಯಾಗಿದ್ದು.ಭಾನುವಾರ ರಾತ್ರಿ ಆತನನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಕೆಲ ಜನರು ಪಿತ್ತೂರಿ ನಡೆಸಿ ಮಾಲಿಯನ್ನು ಬಂಧಿಸುವಂತೆ ಮಾಡಲಾಗಿದೆ. ನ್ಯಾಯಾಲಯದ ಮೇಲೆ ತಮ್ಮಗೆ ಸಂಪೂರ್ಣ ನಂಬಿಕೆ ಇರುವುದಾಗಿ ಬದೌನಿ ಬಿಜೆಪಿ ಅಧ್ಯಕ್ಷ ಅಶೋಕ್ ಭಾರ್ತಿಯ ಹೇಳಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳಿಂದ ವಿವಾದಾತ್ಮಕ ಹೇಳಿಕೆಗಳಿಂದ ಮಾಲಿ ಸುದ್ದಿಯಾಗುತ್ತಿದ್ದ ಎನ್ನಲಾಗಿದೆ.

SCROLL FOR NEXT