ದೇಶ

ಕೋವಿಡ್-19: ಸತತ 4ನೇ ದಿನವೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕಿಂತ ಕಡಿಮೆ!

Srinivasamurthy VN

ನವದೆಹಲಿ: ಭಾರತದಲ್ಲಿ ಸತತ ನಾಲ್ಕನೇ ದಿನವೂ ಕೊರೋನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕಿಂತ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ವೈರಸ್ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದರೂ, ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಮಾತ್ರ ಸತತ 4ನೇ ದಿನವೂ 9 ಲಕ್ಷಕ್ಕಿಂತ ಕಡಿಮೆ ಇದೆ. ಇದಕ್ಕೆ ಪ್ರಮುಖ ಕಾರಣ ಕೋವಿಡ್ ಪೀಡಿತ ರಾಜ್ಯಗಳ ಪೈಕಿ ಹೆಚ್ಚಾಗಿ ಹೊಡೆತ ತಿಂದಿರುವ ಮಹಾರಾಷ್ಟ್ರ,  ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೊಸ ಸೋಂಕು ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆಯೇ ಹೆಚ್ಚಾಗಿದೆ. ಅಲ್ಲದೆ ಹೊಸ ಸೋಂಕು ಪ್ರಕರಣಗಳ ಪ್ರಮಾಣದಲ್ಲೂ ಅಲ್ಪ ಕುಸಿತ ಕಂಡುಬಂದಿದೆ. ಹೀಗಾಗಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕಿಂತ ಕಡಿಮೆ ಇದೆ ಎಂದು ತಜ್ಞರು  ಹೇಳಿದ್ದಾರೆ.

ಪ್ರಸ್ತುತ ದೇಶದಲ್ಲಿ ಹೊಸ ಸೋಂಕಿತರ ಪ್ರಮಾಣ ಶೇ.12.10ರಷ್ಟಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 71, 20, 538 ರಷ್ಟಿದ್ದು, ಈ ಪೈಕಿ ಶೇ.86.4ರಷ್ಟು ಅಂದರೆ 61, 49, 535 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ಶೇ.12.10ರಷ್ಟು ಅಂದರೆ 8, 61, 853 ಮಂದಿ ಸೋಂಕಿತರು ಚಿಕಿತ್ಸೆ  ಪಡೆಯುತ್ತಿದ್ದಾರೆ. ಇನ್ನು ಇಂದು ದೇಶಾದ್ಯಂತ 816 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 1, 09, 15ಕ್ಕೆ ಏರಿಕೆಯಾಗಿದೆ. 

SCROLL FOR NEXT