ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಾರಾಷ್ಟ್ರದಲ್ಲಿ ಇಂದು 8,522 ಹೊಸ ಕೋವಿಡ್ ಪ್ರಕರಣಗಳು ಪತ್ತೆ!

ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಇಂದು 8,522 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾ ಸೋಂಕು
Srinivasa Murthy VN
Updated On : 14 Oct 2020, 12:25 am

ಮುಂಬೈ: ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಇಂದು 8,522 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 8,522 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 15,43,837ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 15,356 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ  12,97,252ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 2,05,415 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಇಂದು 187 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಈ ವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 40,701ಕ್ಕೆ ಏರಿಕೆಯಾಗಿದೆ. 

Advertisement

Advertisement

55 ಮಹಾ ಪೊಲೀಸರಿಗೆ ಸೋಂಕು, ಇಬ್ಬರ ಸಾವು
ಇನ್ನು ಮಹಾರಾಷ್ಟ್ರದಲ್ಲಿ ಇಂದು ಮತ್ತೆ 55 ಪೊಲೀಸರಿಗೆ ಸೋಂಕು ಒಕ್ಕರಿಸಿದ್ದು, ಆ ಮೂಲಕ ಸೋಂಕಿಗೆ ತುತ್ತಾದ ಪೊಲೀಸರ ಸಂಖ್ಯೆ 2,130ಕ್ಕೆ ಏರಿಕೆಯಾಗಿದ್ದು, ಇಂದು ಇಬ್ಬರು ಪೊಲೀಸರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಆ ಮೂಲಕ ಸೋಂಕಿನಿಂದ ಸಾವನ್ನಪ್ಪಿದ ಪೊಲೀಸರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement