ಅಲಹಾಬಾದ್ ನ್ಯಾಯಾಲಯ 
ದೇಶ

ಹತ್ರಾಸ್ ಅತ್ಯಾಚಾರ ಕೇಸ್ ಬೇರೆ ಕೋರ್ಟ್ ಗೆ ವರ್ಗಾಯಿಸಿ: ಸಂತ್ರಸ್ತೆ ಕುಟುಂಬಸ್ಥರ ಮನವಿ

ಕಳೆದ ತಿಂಗಳು ಸಾಮೂಹಿಕ ಅತ್ಯಾಚಾರಕ್ಕೊಳಕ್ಕಾಗಿ ಸಾವನ್ನಪ್ಪಿದ ಹತ್ರಾಸ್ ಸಂತ್ರಸ್ತೆ ಕುಟುಂಬ ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆ ಕೋರ್ಟ್ ಗೆ ವರ್ಗಾಯಿಸುವಂತೆ ಮನವಿ ಮಾಡಿದೆ.

ಲಕ್ನೋ: ಕಳೆದ ತಿಂಗಳು ಸಾಮೂಹಿಕ ಅತ್ಯಾಚಾರಕ್ಕೊಳಕ್ಕಾಗಿ ಸಾವನ್ನಪ್ಪಿದ ಹತ್ರಾಸ್ ಸಂತ್ರಸ್ತೆ ಕುಟುಂಬ ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆ ಕೋರ್ಟ್ ಗೆ ವರ್ಗಾಯಿಸುವಂತೆ ಮನವಿ ಮಾಡಿದೆ.

ಅಲಹಾಬಾದ್ ಕೋರ್ಟ್ ನಿಂದ ದೆಹಲಿ ಅಥವಾ ಮುಂಬಯಿ ಕೋರ್ಟ್ ಗೆ ಶಿಫ್ಟ್ ಮಾಡುವಂತೆ ಸಂತ್ರಸ್ತೆಯ ಕುಟುಂಬ ಮನವಿ ಮಾಡಿದೆ ಎಂದು ಸಂತ್ರಸ್ತೆ ಪರ ವಕೀಲೆ ಸೀಮಾ ಕುಶ್ವಾಹ ಹೇಳಿದ್ದಾರೆ.

'ಪ್ರಕರಣ ಕುರಿತ ಸಿಬಿಐ ತನಿಖಾ ವರದಿ ರಹಸ್ಯವಾಗಿ ಇಡಬೇಕು. ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆಡೆಗೆ ವರ್ಗ ಮಾಡಬೇಕು ಮತ್ತು ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೆ ಭದ್ರತೆ ಒದಗಿಸಬೇಕು ಎನ್ನುವ ಮೂರು ಬೇಡಿಕೆಗಳನ್ನು ಸಂತ್ರಸ್ತೆ ಕುಟುಂಬ ಮಂಡಿಸಿದೆ' ಎಂದು ವಕೀಲೆ ಸೀಮಾ ಖುಶ್ವಾಹ ವಿಚಾರಣೆ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆಯ ಶವ ಸಂಸ್ಕಾರದ ವಿಷಯದಲ್ಲಿ ಭಾರೀ ವಿವಾದ ಸೃಷ್ಟಿಯಾಗಿತ್ತು. ಪ್ರಕರಣದ ಸುತ್ತ ಹಲವಾರು ಜಟಿಲ ಪ್ರಶ್ನೆಗಳು ಹುಟ್ಟಿದ್ದರಿಂದ ಸಮಗ್ರ ವಿವರ ನೀಡುವಂತೆ ರಾಜ್ಯ ಸರಕಾರಕ್ಕೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿತ್ತು. ಇದೇ ವೇಳೆ, ತಮ್ಮ ಅಭಿಪ್ರಾಯ ತಿಳಿಸುವಂತೆ ಸಂತ್ರಸ್ತೆಯ ಕುಟುಂಬಕ್ಕೆ ಸೂಚನೆ ನೀಡಿತ್ತು. ಸೋಮವಾರ ಬೆಳಗ್ಗೆ ಪೊಲೀಸ್‌ ಬಿಗಿಭದ್ರತೆಯಲ್ಲಿ ಲಖನೌ ಪೀಠದ ಮುಂದೆ ಹಾಜರಾದ ಮೃತ ಯುವತಿಯ ತಂದೆ, ತಾಯಿ ಮತ್ತು ಮೂವರು ಸೋದರರು ವಿವರ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!