ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಇಳಿಯುತ್ತಿದೆ ಕೊರೋನಾ ಅಲೆ: 24 ಗಂಟೆಗಳಲ್ಲಿ 55,342 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 71 ಲಕ್ಷ

ಭಾರತಕ್ಕೆ ಕೊರೋನಾ ಕಾಲಿಟ್ಟು ಅನಾಮತ್ತು 7 ತಿಂಗಳ ಬಳಿಕ ಇದೇ ಮೊದಲ ಬಾರಿ ವೈರಸ್ ಸೋಂಕು ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ದೇಶದಲ್ಲಿ ಮಂಗಳವಾರ ಹಲವು ತಿಂಗಳುಗಳ ಬಳಿಕ ಕನಿಷ್ಟ ಕೊರೋನಾ ಪ್ರಕರಣಗಳು ವರದಿಯಾಗಿವೆ.

ನವದೆಹಲಿ: ಭಾರತಕ್ಕೆ ಕೊರೋನಾ ಕಾಲಿಟ್ಟು ಅನಾಮತ್ತು 7 ತಿಂಗಳ ಬಳಿಕ ಇದೇ ಮೊದಲ ಬಾರಿ ವೈರಸ್ ಸೋಂಕು ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ದೇಶದಲ್ಲಿ ಮಂಗಳವಾರ ಹಲವು ತಿಂಗಳುಗಳ ಬಳಿಕ ಕನಿಷ್ಟ ಕೊರೋನಾ ಪ್ರಕರಣಗಳು ವರದಿಯಾಗಿವೆ. 

ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಪ್ರಮಾಣವನ್ನು ತಲುಪಿದ್ದ ಪ್ರಕರಣ ಸಂಕ್ಯೆ ಕಳೆದ ಕೆಲ ವಾರಗಳಿಂದ ಇಳಿಮುಖವಾಗುತ್ತಿದ್ದು, ಮಂಗಳವಾರವೂ ಈ ಪ್ರವೃತ್ತಿ ಮುಂದುವರೆದಿದೆ. ಮಂಗಳವಾರ ದೇಶದಲ್ಲಿ 55,342 ಹೊಸ ಪ್ರಕರಣ ವರದಿಯಾಗಿದ್ದು, ಆಗಸ್ಟ್ 10ರಂದು 51,296 ಪ್ರಕರಣಗಳು ದಾಖಲಾದ ಬಳಿಕ ಇದು ದಿನವೊಂದರಲ್ಲಿ ದಾಖಲಾದ ಕನಿಷ್ಠ ಪ್ರಕರಣಗಳಾಗಿವೆ. ಜುಲೈ.27ರಂದು ದಾಖಲಾದ 628 ಸೋಂಕಿತರ ಸಾವಿನ ಸಂಖ್ಯೆಯ ಬಳಿಕ ಮಂಗಳವಾರ ಕನಿಷ್ಠ ಅಂದರೆ 706 ಸಾವು ವರದಿಯಾಗಿದೆ. 

ಬಹುತೇಕ ರಾಜ್ಯಗಳಲ್ಲಿ ಹೊಸ ಪ್ರಕರಣಗಲ ಸಂಖ್ಯೆ ಇಳಿಕೆಯಾಗಿದ್ದರೂ. ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಮಾತ್ರ ಪರಿಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ಹೇಳಾಲಗುತ್ತಿದೆ. 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55,342 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 71,75,881ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 706 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 1,09,856ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದ ಒಟ್ಟು 71,75,881 ಮಂದಿ ಸೋಂಕಿತರ ಪೈಕಿ 62,27,296 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 8,38,729 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,73,014 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 8,89,45,107 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)