ಹೈದರಾಬಾದ್ ನಲ್ಲಿ ಮಳೆ 
ದೇಶ

ಹೈದರಾಬಾದ್ ನಲ್ಲಿ ಸತತ ಮಳೆ: ಎರಡು ದಿನ ರಜೆ ಘೋಷಣೆ, ಮನೆಯಿಂದ ಹೊರಬರದಂತೆ ಕೆಟಿಆರ್ ಮನವಿ

ಹೈದರಾಬಾದ್ ನಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಳೆಯಿಂದಾಗಿ ಇದುವರೆಗೆ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ.

ಹೈದರಾಬಾದ್: ಹೈದರಾಬಾದ್ ನಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಳೆಯಿಂದಾಗಿ ಇದುವರೆಗೆ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ರಸ್ತೆಗಳಲ್ಲಿ ನೀರು ನುಗ್ಗಿ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಭಾರೀ ಮಳೆ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಿದ್ದು, ಸಚಿವ ಕೆಟಿ ರಾಮ ರಾವ್ ಅವರು ಮನೆಯಿಂದ ಹೊರಬರದಂತೆ ಜನತೆಗೆ ಮನವಿ ಮಾಡಿದ್ದಾರೆ.

ನಿರಂತರ ಮಳೆ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ(ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಮತ್ತು ನಗರಾಭಿವೃದ್ಧಿ) ಅರವಿಂದ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

ಭಾರೀ ಮಳೆಗೆ ಹೈದರಾಬಾದ್ ನ ಬಂದ್ಲಗುಡ ಪ್ರದೇಶದಲ್ಲಿ ಮಗು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಸತತ ಮಳೆಗೆ ಬಂಡೆಯೊಂದು ನೀರಿನಲ್ಲಿ ಕೊಚ್ಚಿ ಬಂದು ಮನೆಗೆ ಬಿದ್ದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಹೈದರಾಬಾದ್ ನ ಶಂಶಾಬಾದ್ ಪ್ರದೇಶದ ಗಗನ್ ಪಹಾದ್ ಎಂಬಲ್ಲಿ  ಕಳೆದ ರಾತ್ರಿ ಸತತ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT