ಬಿಹಾರ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ ಶರದ್ ಯಾದವ್ ಪುತ್ರಿ 
ದೇಶ

ಬಿಹಾರ ಚುನಾವಣೆಗೂ ಮುನ್ನ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆ

ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆಯಲ್ಲಿ ಲೋಕತಾಂತ್ರಿಕ ಜನತಾದಳದ ಮುಖ್ಯಸ್ಥ ಶರದ್ ಯಾದವ್ ಪುತ್ರಿ ಶುಭಾಷಿಣಿ ಯಾದವ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. 

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆಯಲ್ಲಿ ಲೋಕತಾಂತ್ರಿಕ ಜನತಾದಳದ ಮುಖ್ಯಸ್ಥ ಶರದ್ ಯಾದವ್ ಪುತ್ರಿ ಶುಭಾಷಿಣಿ ಯಾದವ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. 

ಶುಭಾಷಿಣಿ ಯಾದವ್ ಅವರ ಜೊತೆಗೆ ಲೋಕ ಜನಶಕ್ತಿ ಪಕ್ಷದ ನಾಯಕ ಹಾಗೂ ಮಾಜಿ ಸಂಸದ ಕಾಳಿ ಪಾಂಡೆ ಸಹ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. 

ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಉಭಯ ನಾಯಕರೂ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಮಹಾಘಟಬಂಧನದ ಹೋರಾಟವನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿಯನ್ನು ತಾವು ತೆಗೆದುಕೊಳ್ಳುತ್ತಿರುವುದಾಗಿ ಸುಭಾಷಿಣಿ ಯಾದವ್ ಹೇಳಿದ್ದು, ತಮಗೆ ಅವಕಾಶ ನೀಡಿದ್ದಕ್ಕೆ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.  

ಎಲ್ ಜೆ ಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಕಾಲಿ ಪಾಂಡೆ 1984 ರಲ್ಲಿ ತಾವು ಸಂಸದರಾಗಿದ್ದಾಗ ರಾಜೀವ್ ಗಾಂಧಿ ಅವರಿಗೆ ಬೆಂಬಲ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!