ದೇಶ

ಹತ್ರಾಸ್ ಅತ್ಯಾಚಾರ ಪ್ರಕರಣ ತನಿಖೆ: ತೀರ್ಪು ಕಾಯ್ದಿರಿಸಿದ 'ಸುಪ್ರೀಂ'

Vishwanath S

ನವದೆಹಲಿ: ಉತ್ತರಪ್ರದೇಶದಲ್ಲಿ ನಡೆದ ಹತ್ರಾಸ್ ಘಟನೆಯ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ.

‘ಸೂಕ್ತ ಸಮಯದಲ್ಲಿ ತೀರ್ಪು ನೀಡುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಪೀಠ ಹೇಳಿದೆ.

ಅರ್ಜಿದಾರರು, ಪ್ರತಿವಾದಿಗಳು, ಉತ್ತರ ಪ್ರದೇಶ ಸರ್ಕಾರ, ರಾಜ್ಯ ಪೊಲೀಸರು ಸೇರಿದಂತೆ ಎಲ್ಲ ಕಡೆಯವರ ವಾದಗಳನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ಕಾಯ್ದಿರಿಸಿದೆ.

ಸೆ.29 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರವನ್ನೂ ಪೊಲೀಸರೇ ತರಾತುರಿಯಲ್ಲಿ ನೆರವೇರಿಸಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. 

ಪೊಲೀಸರು ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದ ಪೋಷಕರಿಗೂ ಅವಕಾಶ ಕೊಡದೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರ ವಿರುದ್ಧ ಕೇಳಿಬಂದಿದೆ. 

SCROLL FOR NEXT