ದೇಶ

ಮುಂದಿನ 6 ತಿಂಗಳಲ್ಲಿ ಕೊರೋನಾ ವ್ಯಾಕ್ಸಿನ್ ವಿತರಣೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

Srinivasamurthy VN

ನವದೆಹಲಿ: ಭಾರತ ಇನ್ನು ಕೆಲವೇ ತಿಂಗಳುಗಳ ಅಂತರದಲ್ಲಿ ಕೊರೋನಾ ವ್ಯಾಕ್ಸಿನ್ ಹೊಂದುವ ನಿರೀಕ್ಷೆ ಇದ್ದು, ಮುಂದಿನ ಆರು ತಿಂಗಳಲ್ಲಿ ವ್ಯಾಕ್ಸಿನ್ ಅನ್ನು ದೇಶಾದ್ಯಂತ ವಿತರಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಭಾರತೀಯ ರೆಡ್‌ಕ್ರಾಸ್ ಸೊಸೈಟಿ (ಐಆರ್‌ಸಿಎಸ್) ಮತ್ತು ಸೇಂಟ್ ಜಾನ್ಸ್ ಆಂಬ್ಯುಲೆನ್ಸ್‌ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿನ ಇತರೆ ದೇಶಗಳಂತೆಯೇ ಭಾರತ ಕೂಡ ಕೊರೋನಾ ವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ. ಮುಂದಿನ ಆರು ತಿಂಗಳಲ್ಲಿ  ಕೊರೋನಾ ಲಸಿಕೆಯನ್ನು ಜನರಿಗೆ ತಲುಪಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತೇವೆ. ಈ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡಲು ನಾವು ಆರು ಅಡಿಗಳಷ್ಟು ದೂರದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಜೊತೆಗೆ ನಿಯಮಿತವಾಗಿ ಕೈ ತೊಳೆಯುವುದು ಮತ್ತು ವಿಶೇಷವಾಗಿ ಸಾರ್ವಜನಿಕ  ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಇದರಿಂದ ಹಲವರ ಜೀವ ಉಳಿಸಬಹುದು ಎಂದು ಹೇಳಿದ್ದಾರೆ.

ಅಂತೆಯೇ ಐಆರ್ ಸಿಎಸ್ ತನ್ನ ರಕ್ತ ಕೇಂದ್ರಗಳ ಮೂಲಕ ಜನರಿಗೆ ಯಾವುದೇ ರೀತಿಯ ರಕ್ತದ ಕೊರತೆಯುಂಟಾಗದಂತೆ ನೋಡಿಕೊಳ್ಳುತ್ತಿದೆ. ಸ್ವಯಂಪ್ರೇರಿತ ರಕ್ತದಾನದ ಪ್ರಚಾರದ ನವೀನ ವಿಧಾನಗಳು ಮತ್ತು ಸಿಬ್ಬಂದಿ, ವ್ಯವಸ್ಥಾಪಕರು ಮತ್ತು ಸ್ವಯಂ ಸೇವಕರ ಸಮರ್ಪಿತ ಪ್ರಯತ್ನಗಳು, ದೇಶಾದ್ಯಂತ ರಕ್ತ  ಸೇವೆಗಳ 24x7 ಕಾರ್ಯಾಚರಣೆಗಳಿಗೆ ಐಆರ್ ಸಿಎಸ್ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.

SCROLL FOR NEXT