ಅರ್ನಾಬ್ ಗೋಸ್ವಾಮಿ 
ದೇಶ

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ 

ಸ್ಪೀಕರ್ ಅನುಮತಿ ಪಡೆಯದೆ ವಿಧಾನಸಭಾ ಪ್ರಕ್ರಿಯೆಗಳ ಪ್ರತಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ನನ್ನು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದಾರೆ.

ಮುಂಬೈ: ಸ್ಪೀಕರ್ ಅನುಮತಿ ಪಡೆಯದೆ ವಿಧಾನಸಭಾ ಪ್ರಕ್ರಿಯೆಗಳ ಪ್ರತಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ನನ್ನು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದಾರೆ.

ಅಕ್ಟೋಬರ್ 13 ರಂದು ಈ ನೋಟಿಸ್ ನೀಡಲಾಗಿದ್ದು, ಅಕ್ಟೋಬರ್ 15ರೊಳಗೆ ಲಿಖಿತ ಸ್ಪಷ್ಟನೆ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈ ಹಿಂದೆ ಎರಡು ದಿನಗಳ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ಹಕ್ಕು ಚ್ಯುತಿ ಉಲ್ಲಂಘನೆಗಾಗಿ ಸೆಪ್ಚೆಂಬರ್ 16ರಂದು  ಅರ್ನಾಬ್ ಗೋಸ್ವಾಮಿ ಅವರಿಂದ ವಿಧಾನಸಭೆ ಕಾರ್ಯದರ್ಶಿ ಸ್ಪಷ್ಟನೆ ಬಯಸಿದ್ದರು.

ಅಕ್ಟೋಬರ್ 5 ರೊಳಗೆ ಇದಕ್ಕೆ ಪ್ರತಿಕ್ರಿಯಿಸುವಂತೆ ಗಡುವು ನೀಡಲಾಗಿತ್ತು. ಆದರೆ, ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅಕ್ಟೋಬರ್ 20ರೊಳಗೆ ಪ್ರತಿಕ್ರಿಯೆ ನೀಡುವಂತೆ ಮರು ನೋಟಿಸ್ ನೀಡಲಾಗಿದೆ.

ಸ್ಪೀಕರ್ ಅನುಮತಿ ಪಡೆಯದೆ ಬಳಸದ ವಿಧಾನಸಭೆ ಪ್ರಕ್ರಿಯೆಗಳ ಪ್ರತಿಯನ್ನು ಸಹ  ಗೋಸ್ವಾಮಿಗೆ ಕಳುಹಿಸಲಾಗಿತ್ತು.ಆದರೆ, ಈ ನೋಟಿಸ್ ವಿರುದ್ಧವಾಗಿ ಗೋಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದಾಗ, ವಿಧಾನಸಭೆ ಪ್ರಕ್ರಿಯೆಗಳ ಪ್ರತಿಯನ್ನು ಸಹ  ಸಲ್ಲಿಸಿದ್ದು, ಹಕ್ಕು ಚ್ಯುತಿ ಉಲ್ಲಂಘನೆಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು