ಉತ್ತರ ಪ್ರದೇಶ: 18 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ, ಕತ್ತುಹಿಸುಕಿ ಕೊಲೆ
ಉತ್ತರ ಪ್ರದೇಶದ ಬಾರಬಂಕಿಯಲ್ಲಿ 18 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬಾರಬಂಕಿ: ಉತ್ತರ ಪ್ರದೇಶದ ಬಾರಬಂಕಿಯಲ್ಲಿ 18 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬಾರಬಂಕಿಯ ಕೃಷಿ ಭೂಮಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಎಸ್ ಪಿ ಆರ್ ಎಸ್ ಗೌತಮ್ ತಿಳಿಸಿದ್ದಾರೆ.
ಅತ್ಯಾಚಾರಕ್ಕೆ ಸಂಬಂಧಿಸಿದ ಆರೋಪಗಳನ್ನು ಸತ್ರಿಖ್ ಪೊಲೀಸ್ ಠಾಣೆಯಲ್ಲಿ ನೋಂದಾಯಿಸಿರುವ ಎಫ್ಐಆರ್ನಲ್ಲಿ ಸೇರಿಸಲಾಗುವುದು ಎಂದ ಅವರು, ಕೆಲವು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹೊಲಕ್ಕೆ ಹೋದ ತನ್ನ ಮಗಳು ವಾಪಸ್ ಬಂದಿಲ್ಲ ಎಂದು ಯುವತಿಯ ತಂದೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದಾದ ನಂತರ ಆಕೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ತಂಡ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.