ದೇಶ

ಮತ್ತೆ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 11,447 ಹೊಸ ಪ್ರಕರಣಗಳು ಪತ್ತೆ

Srinivasamurthy VN

ಮುಂಬೈ: ಕೊರೋನಾ ವೈರಸ್ ನ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಮತ್ತೆ ಸೋಂಕು ಅಬ್ಬರಿಸಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,447 ಸೋಂಕಿತರು ಪತ್ತೆಯಾಗಿದ್ದಾರೆ.

ಹೌದು.. ಮಹಾರಾಷ್ಟ್ರದಲ್ಲಿ ಇಂದು ಒಟ್ಟು 11,447 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 15,76,062ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 13,885 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ  13,44,368ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 1,89,715 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಇಂದು 306 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಈ ವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 41,502ಕ್ಕೆ ಏರಿಕೆಯಾಗಿದೆ. 

ಮುಂಬೈನಲ್ಲಿ 1,823 ಹೊಸ ಸೋಂಕು ಪ್ರಕರಣಗಳು ಪತ್ತೆ
ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಇಂದು 1,823 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,38,548ಕ್ಕೆ ಏರಿಕೆಯಾಗಿದೆ. ಇಂದು ಮುಂಬೈನಲ್ಲಿ 1,644 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮುಂಬೈನಲ್ಲಿ ಗುಣಮುಖರಾದವರ ಸಂಖ್ಯೆ 2,05,111ಕ್ಕೆ ಏರಿಕೆಯಾಗಿದೆ. ಇಂದು ಮುಂಬೈನಲ್ಲಿ 37 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಮುಂಬೈನಲ್ಲಿ ಬಲಿಯಾದವರ ಸಂಖ್ಯೆ 9,635 ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರಸ್ತುತ 19,608 ಸಕ್ರಿಯ ಪ್ರಕರಣಗಳಿವೆ ಎಂದು ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಮಾಹಿತಿ ನೀಡಿದೆ.

SCROLL FOR NEXT