ಪೃಥ್ವಿ-2 ಕ್ಷಿಪಣಿ ಪ್ರಯೋಗ 
ದೇಶ

ಅಣ್ವಸ್ತ್ರ ಸಿಡಿತಲೆ ಸಾಮರ್ಥ್ಯದ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಭುವನೇಶ್ವರ್: ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಒಡಿಶಾದ ಬಾಲಾಸೋರ್ ಕರಾವಳಿ ತೀರದಲ್ಲಿರುವ ಉಡಾವಣಾ ಕೇಂದ್ರದಿಂದ ಇಂದು ಡಿಆರ್ ಡಿಒ ತನ್ನ ಪರಮಾಣು ಸಾಮರ್ಥ್ಯದ ಪೃಥ್ವಿ -2 ಕ್ಷಿಪಣಿಯ ಮತ್ತೊಂದು ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದೆ. ಪೃಥ್ವಿ 2 250 ಕಿ.ಮೀ ದೂರ ಕ್ರಮಿಸಬಲ್ಲ ಮತ್ತು ಅಣ್ವಸ್ತ್ರ ಸಿಡಿತಲೆ ಸಹಿತ ಕ್ಷಿಪಣಿಯಾಗಿದ್ದು, ಬಳಕೆದಾರರ  ಪ್ರಯೋಗವನ್ನು ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್ ನಡೆಸಿದೆ.

ಪೃಥ್ವಿ-2 250 ಕಿಮೀ ದೂರ ಸಾಗುವ ಮತ್ತು 1 ಟನ್ ಅಣ್ವಸ್ತ್ರ ಸಿಡಿತಲೆಯನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ. 9 ಮೀಟರ್ ಎತ್ತರದ ಕ್ಷಿಪಣಿಯನ್ನು ಡಿಆರ್‌ಡಿಒ ಇಂಟಿಗ್ರೇಟೆಡ್ ಗೈಡೆಡ್ ಕ್ಷಿಪಣಿ ಅಭಿವೃದ್ಧಿ ಕಾರ್ಯಕ್ರಮದಡಿ ಅಭಿವೃದ್ಧಿಪಡಿಸಲಾಗಿದೆ. ಕ್ಷಿಪಣಿಯ ಪಥವನ್ನು ವಿವಿಧ ಸ್ಥಳಗಳಲ್ಲಿನ  ದೀರ್ಘ-ಶ್ರೇಣಿಯ, ಬಹು-ಕಾರ್ಯ ರಾಡಾರ್‌ಗಳು ಮತ್ತು ಎಲೆಕ್ಟ್ರೋ-ಆಪ್ಟಿಕ್ ಟೆಲಿಮೆಟ್ರಿ ಕೇಂದ್ರಗಳ ಬ್ಯಾಟರಿಯಿಂದ ಟ್ರ್ಯಾಕ್ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT