ದೇಶ

ನಿತೀಶ್ ಕುಮಾರ್ ಅವರೇ ಬಿಹಾರದ ಮುಂದಿನ ಮುಖ್ಯಮಂತ್ರಿ: ಅಮಿತ್ ಶಾ

Sumana Upadhyaya

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ನಂತರ ಬಿಹಾರದಲ್ಲಿ ಮತ್ತೊಮ್ಮೆ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗಲಿದೆ, ಇಲ್ಲಿ ಅವರಲ್ಲದಿದ್ದರೆ ಯಾರು, ಆದರೆ ಎಂಬ ಸಂಶಯವೇ ಇಲ್ಲ. ನಿತೀಶ್ ಕುಮಾರ್ ಅವರೇ ಬಿಹಾರದ ಮುಂದಿನ ಮುಖ್ಯಮಂತ್ರಿ. ಈ ಬಗ್ಗೆ ನಾವು ಸಾರ್ವಜನಿಕವಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದು ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ನಿನ್ನೆ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡುತ್ತಿದ್ದಾಗ ನಿತೀಶ್ ಕುಮಾರ್ ಅವರ ಜೆಡಿಯುಗಿಂತ ಕೇಸರಿ ಪಕ್ಷ ಬಿಜೆಪಿಗೆ ಹೆಚ್ಚಿನ ಸೀಟು ಬಂದರೆ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ಕೇಳಿದ ಪ್ರಶ್ನೆಗೆ ಅಮಿತ್ ಶಾ ಈ ಸ್ಪಷ್ಟನೆ ನೀಡಿದ್ದಾರೆ.

ಬಿಹಾರದ ಜನತೆಗೆ ಡಬಲ್ ಎಂಜಿನ್ ನ ಸರ್ಕಾರ ಆಡಳಿತಕ್ಕೆ ಸಿಗಲಿದೆ, ಒಂದು ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವ ಮತ್ತು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಎಂದರು.

ಬಿಹಾರದಲ್ಲಿ ಆಡಳಿತಾರೂಢ ಪಕ್ಷದಿಂದ ಲೋಕ ಜನಶಕ್ತಿ ಪಕ್ಷ ಮೈತ್ರಿ ಮುರಿದುಕೊಂಡಿರುವ ಬಗ್ಗೆ ಮಾತನಾಡಿದ ಶಾ, ಪಕ್ಷಕ್ಕೆ ಸಾಕಷ್ಟು ಸೀಟುಗಳನ್ನು ನೀಡುವುದಾಗಿ ಹೇಳಲಾಗಿತ್ತಾದರೂ ಮೈತ್ರಿ ಕಡಿದುಕೊಂಡು ಹೋಗಿದೆ, ಇದು ಅವರ(ಎಲ್ ಜೆಪಿ) ತೀರ್ಮಾನ, ನಮ್ಮದಲ್ಲ ಎಂದರು.

SCROLL FOR NEXT