ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ನಮ್ಮ ಪೊಲೀಸ್ ಸಿಬ್ಬಂದಿಗಳು ಯಾವುದೇ ಹಿಂಜರಿಕೆಯಿಲ್ಲದೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ: ಪ್ರಧಾನಿ ಮೋದಿ

ಪೊಲೀಸ್ ಸಂಸ್ಮರಣಾ ದಿನವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ. 

ನವದೆಹಲಿ: ಪೊಲೀಸ್ ಸಂಸ್ಮರಣಾ ದಿನವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ. 

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದರಿಂದ ಹಿಡಿದು ಭಯಾನಕ ಅಪರಾಧ ಪ್ರಕರಣಗಳನ್ನು ಬಗೆಹರಿಸುವವರೆಗೆ, ವಿಪತ್ತು ನಿರ್ವಹಣೆಗೆ ಸಹಾಯ ಮಾಡುವುದರಿಂದ ಹಿಡಿದು ಕೋವಿಡ್-19 ವಿರುದ್ಧ ಹೋರಾಡುವವರೆಗೆ, ಯಾವುದೇ ಹಿಂಜರಿಕೆಯಿಲ್ಲದೆ ನಮ್ಮ ಪೊಲೀಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಜನ ಸೇವೆಯತ್ತ ಅವರ ಸಮರ್ಪಣೆ ಮತ್ತು ಸರ್ವ ಸನ್ನದ್ಧತೆಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ. 

ಪೊಲೀಸ್ ಸಂಸ್ಮರಣಾ ದಿನವು ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಭಾರತದಾದ್ಯಂತ ಕೃತಜ್ಞತೆ ಸಲ್ಲಿಸುವ ಅವಕಾಶವಾಗಿದೆ. ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ತ್ಯಾಗ ಮತ್ತು ಸೇವೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದು ತಿಳಿಸಿದ್ದಾರೆ. 

ಈ ನಡುವೆ ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ಇಂದು ಬೆಳಿಗ್ಗೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಗೃಹ ಸಚಿವ ಅಮಿತ್ ಶಾ ಗೌರವ ಸಲ್ಲಿಸಿದ್ದಾರೆ. 

ರಾಷ್ಟ್ರಕ್ಕಾಗಿ ಪೊಲೀಸ್ ಸಿಬ್ಬಂದಿಯ ನಿಷ್ಠೆ ಮತ್ತು ಸರ್ವೋಚ್ಚ ತ್ಯಾಗವನ್ನು ಗೌರವಿಸಲು ಪ್ರತಿ ವರ್ಷ ಅಕ್ಟೋಬರ್ 21 ರಂದು ಈ ದಿನವನ್ನು ಆಚರಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT