ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 54,044 ಕೇಸ್ ಪತ್ತೆ, 717 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54,044 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54,044 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 717 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,15,914ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

ಪ್ರತಿನಿತ್ಯ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ನಿನ್ನೆ ಒಂದೇ ದಿನ 61,775 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಈ ವರೆಗೂ ದೇಶದಲ್ಲಿ ಒಟ್ಟಾರೆ 67,95,103 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶಲ್ಲಿನ್ನೂ 7,40,090 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,83,608 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,72,00,379 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!