ದೇಶ

ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಗುಪ್ಕರ್ ಮೈತ್ರಿಯಿಂದ ಅಂತಿಮ ನಿರ್ಧಾರ: ಮೆಹ್ ಬೂಬಾ ಮುಫ್ತಿ 

Srinivas Rao BV

ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬ ನಿರ್ಧಾರವನ್ನು ತಮ್ಮ ಪಕ್ಷ ಹಾಗೂ ಇತ್ತೀಚೆಗೆ ಸ್ಥಾಪನೆಯಾಗಿರುವ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕರ್ ನಿರ್ಧರಿಸಲಿವೆ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ. 

ಜಮ್ಮು-ಕಾಶ್ಮೀರದ ಎರಡು ಮುಖ್ಯವಾಹಿನಿಯ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷ ಗುಪ್ಕರ್ ಮೈತ್ರಿಕೂಟವನ್ನು ಸ್ಥಾಪಿಸಿದ್ದು,  ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಆಗ್ರಹಿಸುತ್ತಿವೆಯಷ್ಟೇ ಅಲ್ಲದೇ ಇದಕ್ಕೆ ಸಂಬಂಧಿಸಿದ ಎಲ್ಲಾ ಪಕ್ಷಗಳೊಂದಿಗೂ ಮಾತುಕತೆ ನಡೆಸುತ್ತಿವೆ. 

ಗೃಹ ಬಂಧನದಿಂದ ಹೊರಬಂದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಾಶ್ಮೀರಕ್ಕೆ ಹಿಂದಿನ ಸ್ಥಾನಮಾನ ಮತ್ತೆ ಸಿಗುವವರೆಗೂ ತಾವು ವೈಯಕ್ತಿಕವಾಗಿ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಇಚ್ಛಿಸುತ್ತಿಲ್ಲ ಎಂದು ಹೇಳಿದ್ದಾರೆ. 

ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಪುನಃ ಬಂದರೂ ನನಗೆ ಅಧಿಕಾರದಲ್ಲಿ ಆಸಕ್ತಿಯಿಲ್ಲ ಎಂದು ಮೆಹೆಬೂಬಾ ಮುಫ್ತಿ ತಿಳಿಸಿದ್ದಾರೆ. 

SCROLL FOR NEXT